ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ : ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಭರ್ಜರಿ ಸಿದ್ದತೆ – Vishwanews24
ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ, ನಾಳೆಯಿಂದ ಕರ್ನಾಟಕ ರಾಜ್ಯದ ಮೊದಲ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.
ಹುಬ್ಬಳ್ಳಿಯ ಗಬ್ಬೂರ್ ಬೈಪಾಸ್ ಬಳಿಯ ಕೆಎಲ್ ಇ ಜಾಗದಲ್ಲಿ ನಾಳೆ ಪ್ರಧಾನಿ ಮೋದಿ ಅವರ ಕರ್ನಾಟಕ ರಾಜ್ಯದ ಮೊದಲ ಲೋಕಸಭೆ ಚುನಾವಣಾ ಪ್ರಚಾರ ರ್ಯಾಲಿಗೆ ಭರದ ಸಿದ್ದತೆಗಳು ನಡೆದಿವೆ. ಬೃಹತ್ ವೇದಿಕೆ, ಲಕ್ಷಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಸಮಾವೇಶಕ್ಕೆ ಆಗಮಿಸುವವರಿಗೆ ಪಾರ್ಕಿಂಗ್ ವ್ಯವಸ್ಥೆ, ಊಟೋಪಚಾರದ ವ್ಯವಸ್ಥೆ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ 32 ಸಮಿತಿಗಳನ್ನು ಬಿಜೆಪಿ ಮಾಡಿದ್ದು, ಆಯಾ ಸಮಿತಿಯ ಮುಖ್ಯಸ್ಥರು ತಮ್ಮ ತಮ್ಮ ಕಾರ್ಯಗಳನ್ನು ಅಚ್ಚಕಟ್ಟಾಗಿ ನಿರ್ವಹಿಸುತ್ತಿದ್ದಾರೆ.
ಉತ್ತರ ಕನ್ನಡ, ಹಾವೇರಿ, ಧಾರವಾಡ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಬೃಹತ್ ರ್ಯಾಲಿ ಇದಾಗಿರುವುದರಿಂದ ಎರಡು ಲಕ್ಷದಷ್ಟು ಜನರು ಬರುವ ನಿರೀಕ್ಷೆ ಇದೆ.
ಕಾಪು ಜೇಸಿಐ ಅಧ್ಯಕ್ಷೆ ಶಾರದೇಶ್ವರಿ ಗುರ್ಮೆ, ಜೇಸಿಐ ನಿಕಟಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಅಭಿವೃದ್ಧಿ ಮತ್ತು ಬೆಳವಣ ಗೆ ವಿಭಾಗದ ನಿರ್ದೇಶಕಿ ಸೌಮ್ಯ ರಾಕೇಶ್, ಪೂರ್ವ ವಲಯಾದಿಕಾರಿಗಳಾದ ಅನಿಲ್ ಕುಮಾರ್, ಪ್ರವೀಣ್ ಕುಮಾರ್ ಗುರ್ಮೆ, ಶಿವಣ್ಣ ಬಾಯಾರ್, ನಿಕಟ ಪೂರ್ವ ಅಧ್ಯಕ್ಷ ರಮೇಶ್ ನಾಯ್ಕ್, ಪೂರ್ವಾಧ್ಯಕ್ಷರಾದ ನೀಲಾನಂದ್ ನಾಯ್ಕ್, ಅರುಣ್ ಶೆಟ್ಟಿ ಪಾದೂರು, ರಾಜೇಂದ್ರ ಬಿ.ಕೆ., ಸಂದೀಪ್ ಶೆಟ್ಟಿ, ಕಾರ್ಯದರ್ಶಿ ಸುಖಲಾಕ್ಷಿ ಬಂಗೇರ, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಎಸ್. ಶೆಟ್ಟಿ, ಯುವ ಜೇಸಿ ಅಧ್ಯಕ್ಷ ಆದಿತ್ಯ ಪಿ. ಗುರ್ಮೆ, ಪದಾದಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

