ನಾಳೆ ರಾಜ್ಯಕ್ಕೆ ಪ್ರಧಾನಿ – ಹುಬ್ಬಳ್ಳಿಯಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಉದ್ಘಾಟನೆ : ಮಂಡ್ಯದಲ್ಲಿ ಸುಮಾರು 2 ಕಿ.ಮೀ ರೋಡ್ ಶೋ  – Vishwanews24

Featured, ರಾಜ್ಯ ನ್ಯೂಸ್

ನಾಳೆ ರಾಜ್ಯಕ್ಕೆ ಪ್ರಧಾನಿ – ಹುಬ್ಬಳ್ಳಿಯಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಉದ್ಘಾಟನೆ : ಮಂಡ್ಯದಲ್ಲಿ ಸುಮಾರು 2 ಕಿ.ಮೀ ರೋಡ್ ಶೋ 

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ದಶಪಥ ಹೆದ್ದಾರಿ ಹಾಗೂ ಹುಬ್ಬಳ್ಳಿಯಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂನ್ನು ಉದ್ಘಾಟನೆ ಮಾಡಲಿದ್ದಾರೆ.

ಮೋದಿ ಮಂಡ್ಯದಲ್ಲಿ ಸುಮಾರು 2 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಅದೇ ರೀತಿ ಈ ವೇಳೆ 500 ಕಲಾ ತಂಡಗಳು ಪ್ರದರ್ಶನ ನಡೆಸಲಿದ್ದು , ಅದ್ಬುತ ಕ್ಷಣಗಳಿಗೆ ಮಂಡ್ಯ ಜನತೆ ಸಾಕ್ಷಿಯಾಗಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಇನ್ನು ನಾಳೆ ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ ಉದ್ಘಾಟನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.

ಮಾ. 19ರಂದು ಕೇಂದ್ರ ವಿದೇಶಾಂಗ  ಸಚಿವ ಎಸ್‌. ಜೈಶಂಕರ್‌ ಉಡುಪಿಗೆ  – Vishwanews24

 

 

 

 

Leave a Reply