ನಾಳೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಬಿಎಸ್ ಯಡಿಯೂರಪ್ಪ – vishwanews24
ನಾಳೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಬಿಎಸ್ ಯಡಿಯೂರಪ್ಪ
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಎರಡನೇ ಪಟ್ಟಿ ನಾಳೆ ಬಿಡುಗಡೆಯಾಗಲಿದ್ದು ಅದರಲ್ಲಿ ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದರು.
ಫೇಸ್‌ಬುಕ್ ಇನ್ಸ್ಟಾಗ್ರಾಮ್ ಬಳಕೆದಾರರಿಗೆ ಬಿಗ್ ಶಾಕ್.. ಎಲ್ಲರ FB ಅಕೌಂಟ್ ದಿಢೀರ್ ಲಾಗ್ ಔಟ್ – vishwanews24
ಸಾಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇಲ್ಲವಾಗಿದೆ. ಆದರೆ ನಾಳೆ (ಬುಧವಾರ) ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ತಿಳಿಸಿದರು.
ಫೇಸ್‌ಬುಕ್ ಇನ್ಸ್ಟಾಗ್ರಾಮ್ ಬಳಕೆದಾರರಿಗೆ ಬಿಗ್ ಶಾಕ್.. ಎಲ್ಲರ FB ಅಕೌಂಟ್ ದಿಢೀರ್ ಲಾಗ್ ಔಟ್ – vishwanews24
