Featured

ನಾಳೆ ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ ; ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಪ್ರಕಟಣೆ – Vishwanews24

ನಾಳೆ ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ ; ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಪ್ರಕಟಣೆ

ಬೆಂಗಳೂರು(Vishwanews24): ನಾಳೆ ವಿಧಾನಸೌಧ ಮುಂಭಾಗ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಅಹವಾಲು ಸಲ್ಲಿಕೆಗೆ ಆನ್ಲೈನ್ ಮೂಲಕ ನೋಂದಾಯಿಸಲು 1902 ಡಯಲ್ ಮಾಡಬಹುದಾಗಿದೆ. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಜನಸ್ಪಂದನಕ್ಕೆ ಆಗಮಿಸುವವರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ವರೆಗೆ ಹೋಗಲು ಮತ್ತು ಬರಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.

ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago