ತಾಂತ್ರಿಕ ಸಮಸ್ಯೆಯಿಂದಾಗಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕೋಟಿಗೊಬ್ಬ 3 ಇಂದು ತೆರೆ ಕಾಣಲಿಲ್ಲ. ಆಯುಧಪೂಜೆ ಪ್ರಯುಕ್ತ ಬೆಳ್ಳಿತೆರೆಗೆ ಗ್ರ್ಯಾಂಡ್ ಎಂಟ್ರಿ ಕೊಡಲು ತಯಾರಿ ನಡೆಸಿಕೊಂಡಿದ್ದ ಕೋಟಿಗೊಬ್ಬ 3 ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಎಲ್ಲ ಸರಿಯಾಗಿ ಇದ್ದಿದ್ದರೆ ಇಂದು ಬೆಳಗಿನಿಂದ ಸುದೀಪ್ ಅಭಿಮಾನಿಗಳು ಸಂಭ್ರಮದಿಂದ ಚಿತ್ರಮಂದಿರಗಳಲ್ಲಿ ಹಬ್ಬ ಆಚರಿಸಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಸಿನಿಮಾ ಇವತ್ತು ರಿಲೀಸ್ ಆಗಿಲ್ಲ. ಇನ್ನು ಬೆಳಗಿನಿಂದ ಚಿತ್ರಮಂದಿರಗಳ ಬಳಿ ಬಂದು ಸಿನಿಮಾ ನೋಡಲು ಕಾಯುತ್ತಿರುವ ಸಿನಿಪ್ರಿಯರು ಬೇಸದಿಂದ ಮನೆಯತ್ತ ಮರಳುತ್ತಿದ್ದಾರೆ.
ಕಾರಣಾಂತರದಿಂದಾಗಿ ‘ಕೋಟಿಗೊಬ್ಬ 3’ ಚಿತ್ರ ರಿಲೀಸ್ ಆಗದೇ ಇರುವುದಕ್ಕೆ ನಟ ಕಿಚ್ಚ ಸುದೀಪ್ ಕ್ಷಮೆ ಯಾಚಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಆಗಿರುವ ಸಮಸ್ಯೆಗೆ ಕ್ಷಮಿಸಿ ಎಂದು ಮನವಿ ಮಾಡಿದ್ದಾರೆ.
‘ಚಿತ್ರಮಂದಿರಗಳ ಬಳಿ ಕಾಯುತ್ತಿರುವ ಎಲ್ಲ ಸ್ನೇಹಿತರಿಗೆ ಈ ಬಗ್ಗೆ ತಿಳಿಸುವ ಜವಾಬ್ದಾರಿ ನನ್ನದು. ಕಾರಣಾಂತರಗಳಿಂದಾಗಿ ಸಿನಿಮಾ ಪ್ರದರ್ಶನದಲ್ಲಿ ವ್ಯತ್ಯಯವಾಗಿದೆ. ಇದಕ್ಕೂ ಚಿತ್ರಮಂದಿರದವರಿಗೂ ಯಾವುದೇ ಸಂಬಂಧವಿಲ್ಲ. ಅವರ ಬಳಿ ಕೆಟ್ಟದಾಗಿ ಅಥವಾ ಸಿಟ್ಟಿನಿಂದ ನಡೆದುಕೊಳ್ಳಬೇಡಿ’ ಎಂದು ಸುದೀಪ್ ಮನವಿ ಮಾಡಿದ್ದಾರೆ.
‘ನನಗೂ ಸಿನಿಮಾವನ್ನು ರಿಲೀಸ್ ಮಾಡಲು ಕಾತರನಾಗಿದ್ದೇನೆ. ಇಷ್ಟು ದೊಡ್ಡ ಗ್ಯಾಪ್ ನಂತರ ಚಿತ್ರವನ್ನು ತೆರೆಗೆ ತರುವ ಸಂಭ್ರಮದಲ್ಲಿದ್ದೇವೆ. ಆದರೆ ಇಂತಹ ಪರಿಸ್ಥಿತಿಯಲ್ಲಿ ಕೊಂಚ ತಾಳ್ಮೆ ಇರಲಿ. ದಯವಿಟ್ಟು ಚಿತ್ರಮಂದಿರ ಹಾಗೂ ಬಂದಿರುವ ಪ್ರೇಕ್ಷಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ. ಸಿನಿಮಾ ರಿಲೀಸ್ ಹಾಗೂ ಪ್ರದರ್ಶನದ ಸಮಯ ಕುರಿತಂತೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…