ಬೆಂಗಳೂರು : “ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಸಂಜೆ 4.30ಕ್ಕೆ ಪ್ರಕಟವಾಗಲಿದೆ” ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದ್ವಿತೀಯ ಪಿಯುಸಿ ಫಲಿತಾಂಶವು ನಾಳೆ ಸಂಜೆ 4.30ಕ್ಕೆ ಪ್ರಕಟವಾಗಲಿದ್ದು, ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಗ್ರೇಡ್ ಬದಲು ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ತೀರ್ಮಾನಿಸಿದೆ. ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶವು ಅಂಕಗಳ ಮಾದರಿಯಲ್ಲಿ ಪ್ರಕಟವಾಗಲಿದೆ” ಎಂದು ಮಾಹಿತಿ ನೀಡಿದ್ದಾರೆ.
“ಫಲಿತಾಂಶ ನೋಡಲು ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡದುಕೊಳ್ಳಬೇಕು. ಇಲಾಖೆಯ ವೆಬ್ ಸೈಟ್‌ನಲ್ಲಿ Know my registration number’ಲಿಂಕ್ ನೀಡಿ ಪ್ರತಿ ವಿದ್ಯಾರ್ಥಿಗಳು ಆ ಲಿಂಕ್‌ನ ಮೂಲಕ ನೋಂದಣಿ ಸಂಖ್ಯೆ ಪಡೆಯಬಹುದು” ಎಂದು ತಿಳಿಸಿದ್ದಾರೆ.
“ವಿದ್ಯಾರ್ಥಿಗಳಿಗೆ ಅಂಕ ನೀಡಲು ವಿದ್ಯಾರ್ಥಿಯು ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಹಾಗೂ ಇಂಟರ್ನಲ್ ಅಸೆಸ್ಮೆಂಟ್‌ನಲ್ಲಿ ಶೇ.10 ಅಂಕಗಳ ಆಧಾರದ ಮೇಲೆ ಈ ವರ್ಷ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟ ಮಾಡಲಿದೆ” ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…