ನವದೆಹಲಿ: ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಅವರು ಇಂದು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ನಾಳೆ 2ನೇ ಬಾರಿಗೆ ಹರಿಯಾಣದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹರಿಯಾಣದ ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಸೈನಿ ನಯಾಬ್ ಸಿಂಗ್ ಸೈನಿ ಅವರ ಹೆಸರನ್ನು ಪ್ರಸ್ತಾಪಿಸಿದರು. ಈ ವೇಳೆ ನಯಾಬ್ ಸಿಂಗ್ ಸೈನಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಅವರು, ಹರಿಯಾಣ ದೇಶದ ರಾಜಕೀಯ ಪಂಡಿತರನ್ನು ತಪ್ಪು ಎಂದು ಸಾಬೀತುಪಡಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಈ ಮೂಲಕ ಸತತ ೩ನೇ ಬಾರಿಗೆ ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ ಎಂದರು.
ಈ ವೇಳೆ ಮಾತನಾಡಿದ ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಯಾಬ್ ಸಿಂಗ್ ಸೈನಿ ಅವರು, ಹರಿಯಾಣದ ಜನರು ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಲ್ಲಿ ನಂಬಿಕೆ ಇಟ್ಟು 3ನೇ ಬಾರಿಗೆ ಬಿಜೆಪಿ ಸರ್ಕಾರವನ್ನು ರಚಿಸಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಪಡಿಸುವ ಪ್ರಧಾನಿ ಮೋದಿಯವರ ದೃಷ್ಟಿಕೋನಕ್ಕೆ ಬಲ ಸಿಕ್ಕಂತಾಗಿದೆ ಎಂದು ತಿಳಿಸಿದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…