ನಾಳೆ SSLC ಫಲಿತಾಂಶ  ಪ್ರಕಟ – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ನಾಳೆ SSLC ಫಲಿತಾಂಶ  ಪ್ರಕಟ

ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಕೋರ್ಟ್‌ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.

Leave a Reply