ಅಮೇಥಿ: ರಾಹುಲ್ ಗಾಂಧಿ ಅವರ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಅವರು ತಮ್ಮ ಅಣ್ಣ ಪ್ರಧಾನಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ಅಮೇಥಿಗೆ ಭೇಟಿ ನೀಡಿದ ಅವರು ಇಂದು ರಾಯ್ ಬರೇಲಿಗೆ ತೆರಳಲಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸವನ್ನು ಪ್ರಿಯಾಂಕಾ ಮಾಡುತ್ತಿದ್ಧಾರೆ.
“ನಾವು ಈ ಲೋಕಸಭೆ ಚುನಾವಣೆ ಗೆಲ್ಲುತ್ತೇವೆ. ರಾಹುಲ್ ಪ್ರಧಾನಿಯಾಗುತ್ತಾರೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನೆಹರೂ ಕುಟುಂಬದ ಸದಸ್ಯರೊಬ್ಬರು ರಾಹುಲ್ ಗಾಂಧಿ ಅವರು ಪ್ರಧಾನಿ ಆಗಲಿ ಎಂದು ಹೇಳಿದ್ದು ಇದೇ ಮೊದಲು ಎನ್ನಬಹುದು, ಸೋನಿಯಾ ಗಾಂಧಿ ಕೂಡ ಯಾವತ್ತೂ ತಮ್ಮ ಮಗ ಪ್ರಧಾನಿ ಆಗಲಿ ಎಂದು ಬಹಿರಂಗವಾಗಿ ಹೇಳಿದವರಲ್ಲ.
ಬೇರೆ ಬೇರೆ ಪಕ್ಷಗಳ ಕೆಲ ಮುಖಂಡರು ರಾಹುಲ್ ಪ್ರಧಾನಿಯಾಗಲಿ ಎಂದು ಹೇಳಿದ್ದಾರೆ. ಡಿಎಂಕೆ ಪಕ್ಷದ ಎಂ.ಕೆ. ಸ್ಟಾಲಿನ್, ಆರ್ಜೆಡಿ ಪಕ್ಷದ ತೇಜಸ್ವಿ ಯಾದವ್ ಮೊದಲಾದವರು ರಾಹುಲ್ ಪರ ಬ್ಯಾಟ್ ಬೀಸಿದ್ದರು. ದೇವೇಗೌಡ ಮತ್ತು ಕುಮಾರಸ್ವಾಮಿ ಕೂಡ ರಾಹುಲ್ ಪ್ರಧಾನಿಯಾಗಲಿ ಎಂದು ಇಚ್ಛೆ ತೋರ್ಪಡಿಸಿದ್ದರು. ಈಗ ಈ ಸಾಲಿಗೆ ಪ್ರಿಯಾಂಕ ಸೇರ್ಪಡೆಯಾಗಿದ್ದಾರೆ. ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಾಯಾವತಿ ಅವರಂತಹ ಕೆಲ ಹಿರಿಯ ಮುಖಂಡರು ಮಾತ್ರ ರಾಹುಲ್ ಪ್ರಧಾನಿಯಾಗುವ ಬಗ್ಗೆ ಉತ್ಸುಕತೆ ತೋರಿಲ್ಲ. ಚುನಾವಣೆ ಮುಗಿದ ಬಳಿಕ ಮೈತ್ರಿ ಪಕ್ಷಗಳು ಪ್ರಧಾನಿಯನ್ನು ಆಯ್ಕೆ ಮಾಡಲಿ ಎಂಬುದು ಅವರ ಅಭಿಪ್ರಾಯವಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…