Featured

ನಾವು ತಡವಾಗಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದರಿಂದ ಸೋಲಾಗಿದೆ , ಮತ್ತೊಮ್ಮೆ ಜೆಡಿಎಸ್ ಬಾವುಟ ಹಾರಿಸುತ್ತೇವೆ : ಪ್ರಜ್ವಲ್ ರೇವಣ್ಣ -Vishwanews24

ಬೆಂಗಳೂರು: ನಿರೀಕ್ಷಿತ ಮಟ್ಟಕ್ಕೆ ಫಲಿತಾಂಶ ಬರದೇ ಇದ್ದದ್ದು ಬೇಸರ ತರಿಸಿದೆ. ಈ ಸೋಲಿಗೆ ಯಾರನ್ನೂ ದೂರುವುದಕ್ಕೆ ಆಗಲ್ಲ. ಈ ಬಾರಿ ಆದ ನಮ್ಮ ಲೋಪದೋಷ ಸರಿಪಡಿಸಿಕೊಳ್ಳುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ದೇವೇಗೌಡ ನಿವಾಸದಲ್ಲಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ರಾಜಕೀಯದಲ್ಲಿ ಸೋಲು-ಗೆಲುವು ಎನ್ನುವುದು ಸಾಮಾನ್ಯ. ಗೆದ್ದಾಗ ಬೀಗುವುದಿಲ್ಲ. ಸೋತಾಗ ಮೂಲೆ ಸೇರಿಕೊಳ್ಳಲ್ಲ. ಈ ಬಾರಿಯ ಚುನಾವಣೆಯಲ್ಲಿ ನಮ್ಮಿಂದಲೇ ತಪ್ಪಾಗಿರಬಹುದು. ಅದನನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು ಅನುಭವಿಸಿದ ವಿಚಾರವಾಗಿ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದರು. ಕೆ.ಆರ್‌.ಪೇಟೆಯಲ್ಲಿ ಕಾಂಗ್ರೆಸ್ ಮತ ಬಿಜೆಪಿಗೆ ಶಿಫ್ಟ್ ಆಗಿದೆ. ನಮ್ಮ ಜೆಡಿಎಸ್ ಮತವನ್ನು ನಾವು ಪಡೆದುಕೊಂಡಿದ್ದೇವೆ. ಕಾಂಗ್ರೆಸ್ ಮತಗಳು ಬಿಜೆಪಿಗೆ ಹೋಗಿದೆ ಅಷ್ಟೆ ಎಂದರು.

ಸಾಮಾನ್ಯ ಚುನಾವಣೆಯೇ ಬೇರೆ. ಉಪ ಚುನಾವಣೆಯೇ ಬೇರೆ. ನಾವು ಮುಂದಿನ ದಿನ ಕಾರ್ಯಕರ್ತರ ಜೊತೆ ಕೂತು ಚರ್ಚಿಸುತ್ತೇವೆ. ಚರ್ಚಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇವೆ ಎಂದು ಪ್ರಜ್ವಲ್​​​ ಹೇಳಿದರು.

ಹುಣಸೂರಲ್ಲಿ ಮತ್ತೊಮ್ಮೆ ಜೆಡಿಎಸ್ ಬಾವುಟ ಹಾರಿಸುತ್ತೇವೆ. ನಾವು ತಡವಾಗಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದರಿಂದ ಸೋಲಾಗಿದೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago