ಬೆಂಗಳೂರು: ನಿರೀಕ್ಷಿತ ಮಟ್ಟಕ್ಕೆ ಫಲಿತಾಂಶ ಬರದೇ ಇದ್ದದ್ದು ಬೇಸರ ತರಿಸಿದೆ. ಈ ಸೋಲಿಗೆ ಯಾರನ್ನೂ ದೂರುವುದಕ್ಕೆ ಆಗಲ್ಲ. ಈ ಬಾರಿ ಆದ ನಮ್ಮ ಲೋಪದೋಷ ಸರಿಪಡಿಸಿಕೊಳ್ಳುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ದೇವೇಗೌಡ ನಿವಾಸದಲ್ಲಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ರಾಜಕೀಯದಲ್ಲಿ ಸೋಲು-ಗೆಲುವು ಎನ್ನುವುದು ಸಾಮಾನ್ಯ. ಗೆದ್ದಾಗ ಬೀಗುವುದಿಲ್ಲ. ಸೋತಾಗ ಮೂಲೆ ಸೇರಿಕೊಳ್ಳಲ್ಲ. ಈ ಬಾರಿಯ ಚುನಾವಣೆಯಲ್ಲಿ ನಮ್ಮಿಂದಲೇ ತಪ್ಪಾಗಿರಬಹುದು. ಅದನನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು ಅನುಭವಿಸಿದ ವಿಚಾರವಾಗಿ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದರು. ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಮತ ಬಿಜೆಪಿಗೆ ಶಿಫ್ಟ್ ಆಗಿದೆ. ನಮ್ಮ ಜೆಡಿಎಸ್ ಮತವನ್ನು ನಾವು ಪಡೆದುಕೊಂಡಿದ್ದೇವೆ. ಕಾಂಗ್ರೆಸ್ ಮತಗಳು ಬಿಜೆಪಿಗೆ ಹೋಗಿದೆ ಅಷ್ಟೆ ಎಂದರು.
ಸಾಮಾನ್ಯ ಚುನಾವಣೆಯೇ ಬೇರೆ. ಉಪ ಚುನಾವಣೆಯೇ ಬೇರೆ. ನಾವು ಮುಂದಿನ ದಿನ ಕಾರ್ಯಕರ್ತರ ಜೊತೆ ಕೂತು ಚರ್ಚಿಸುತ್ತೇವೆ. ಚರ್ಚಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇವೆ ಎಂದು ಪ್ರಜ್ವಲ್ ಹೇಳಿದರು.
ಹುಣಸೂರಲ್ಲಿ ಮತ್ತೊಮ್ಮೆ ಜೆಡಿಎಸ್ ಬಾವುಟ ಹಾರಿಸುತ್ತೇವೆ. ನಾವು ತಡವಾಗಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದರಿಂದ ಸೋಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…