Featured

ನಾವು ತನಿಖೆಯ ಪರವಾಗಿದ್ದೇವೆ , ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ : ಪ್ರಜ್ವಲ್‌ ಬಗ್ಗೆ ಅಮಿತ್‌ ಶಾ ಪ್ರತಿಕ್ರಿಯೆ – Vishwanews24

ನಾವು ತನಿಖೆಯ ಪರವಾಗಿದ್ದೇವೆ , ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ : ಪ್ರಜ್ವಲ್‌ ಬಗ್ಗೆ ಅಮಿತ್‌ ಶಾ ಪ್ರತಿಕ್ರಿಯೆ

ಡಿಸ್ಪುರ್: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಗುವಾಹಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಪ್ರತಿಕ್ರಿಯೆ ನೀಡಿದ್ದಾರೆ.

ಗುವಾಹಟಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಇದೊಂದು ಬಹಳ ಆಘಾತಕಾರಿ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್  ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದರು.

ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago