ಡಿಸ್ಪುರ್: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಗುವಾಹಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.
ಗುವಾಹಟಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಇದೊಂದು ಬಹಳ ಆಘಾತಕಾರಿ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದರು.
ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…