Featured

ನಾವು ಪ್ರಗತಿಪರ ಧೋರಣೆಯಿಂದ ಕಾಂಗ್ರೆಸ್ ಸೇರಿದ್ದು, ಅಧಿಕಾರದ ಆಸೆಯಿಂದ ಸೇರಿದವರಲ್ಲ : ವೀರಪ್ಪ ಮೊಯ್ಲಿ -Vishwanews24

ನಾವು ಪ್ರಗತಿಪರ ಧೋರಣೆಯಿಂದ ಕಾಂಗ್ರೆಸ್ ಸೇರಿದ್ದು, ಅಧಿಕಾರದ ಆಸೆಯಿಂದ ಸೇರಿದವರಲ್ಲ : ವೀರಪ್ಪ ಮೊಯ್ಲಿ -Vishwanews24

ಸಾಯುವವರೆಗೆ ನಾನು ಕಾಂಗ್ರೆಸ್ ಕಟ್ಟಾಳಾಗಿಯೇ ಇರುತ್ತೇನೆ. ಬಿಜೆಪಿಯತ್ತ ನಾವು ಮುಖ ಮಾಡುವವರಲ್ಲ..

ನಾನು ಕನಸಿನಲ್ಲೂ ಮೋದಿಗೆ ಬೆಂಬಲ ಕೊಡುವನಲ್ಲ..

ಬೆಂಗಳೂರು : ಕಾಂಗ್ರೆಸ್​ ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ತರಬೇಕೆಂದು ಆಗ್ರಹಿಸಿ ಪತ್ರ ಬರೆದವರಲ್ಲಿ ನಾನೂ ಒಬ್ಬ. ಆದರೆ, ಪಕ್ಷದ ನಾಯಕತ್ವವನ್ನು ಪ್ರಶ್ನಿಸಿ ನಾನು ಪತ್ರ ಬರೆದಿರಲಿಲ್ಲ. ಪಕ್ಷ ಸಂಘಟನೆಯಷ್ಟೇ ನಮ್ಮೆಲ್ಲರ ಉದ್ದೇಶವಾಗಿತ್ತು. ನಾವು ನಮ್ಮ ಅಧ್ಯಕ್ಷರಿಗೆ ಬರೆದ ಪತ್ರ ಹೇಗೆ ಲೀಕ್ ಆಯಿತೋ ಗೊತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದ 23 ನಾಯಕರಲ್ಲಿ ತಾವೂ ಒಬ್ಬರು ಎಂದು ವೀರಪ್ಪ ಮೊಯ್ಲಿ ಒಪ್ಪಿಕೊಂಡಿದ್ದಾರೆ. ನಿನ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆ ಆಗಿದೆ. ಪ್ರಮುಖ ಚರ್ಚೆಗಳು ಆಗಿದೆ. 23 ಕಾಂಗ್ರೆಸ್ ನಾಯಕರು ಪಕ್ಷದ ಪುನರ್ ಸಂಘಟನೆ ಬಗ್ಗೆ ಪತ್ರ ಬರೆದಿರುವುದು ನಿಜ. ಅದರಲ್ಲಿ ನಾನು ಕೂಡ ಒಬ್ಬ. ಆದರೆ, ನಾವು ಯಾರೂ ನಾಯಕತ್ವ ಬದಲಾವಣೆ ಬಗ್ಗೆ ಪತ್ರ ಬರೆದಿಲ್ಲ. ಕಾಂಗ್ರೆಸ್ ಈಗ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಇದೆ ಎಂದು ರಾಹುಲ್ ಗಾಂಧಿ ಅವರಿಗೆ ಹೇಳಿದೆ. ನಾವು ನಮ್ಮ ಪತ್ರವನ್ನು ಅಧ್ಯಕ್ಷೆಗೆ ಮಾತ್ರ ಬರೆದಿದ್ದು, ಅದು ಹೇಗೆ ಲೀಕ್ ಆಯ್ತು ಎಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಎಲ್ಲಾ ಚಟುವಟಿಕೆಗಳಲ್ಲಿ ನಾವು ಭಾಗಿಯಾದವರು. ನಾವು ಸದುದ್ದೇಶದಿಂದ ಪತ್ರ ಬರೆದಿದ್ದೆವು. ಆ ಪತ್ರದಲ್ಲಿ ನಾನು ಕೂಡ ಸಹಿ ‌ಹಾಕಿದ್ದೆ. ಪಕ್ಷ ಸಂಘಟನೆಗಾಗಿ ನಾವು ತಿಳಿಸಿದ್ದೆವು. ನಾವ್ಯಾರೂ ಪಕ್ಷದ ವಿರುದ್ಧ ಪತ್ರ ಬರೆದವರಲ್ಲ. ಆ ಪತ್ರ ಹೇಗೆ ಲೀಕ್ ಆಯ್ತು? ಇದರ ತನಿಖೆ ಆಗಬೇಕು. ಈ ಬಗ್ಗೆ ನಮ್ಮ ಅಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕು ಎಂದು ವೀರಪ್ಪ ಮೊಯ್ಲಿ ಆಗ್ರಹಿಸಿದ್ದಾರೆ.

ನಾವು ಪ್ರಗತಿಪರ ಧೋರಣೆಯಿಂದ ಕಾಂಗ್ರೆಸ್ ಸೇರಿದ್ದು. ಅಧಿಕಾರದ ಆಸೆಯಿಂದ ನಾವು ಕಾಂಗ್ರೆಸ್ ಸೇರಿದವರಲ್ಲ. ನಾವು ಇಂದಿರಾ ಗಾಂಧಿ ಅವರ ಜೊತೆ ಕೆಲಸ ಮಾಡಿದ್ದೆವು. ದೇವರಾಜ ಅರಸರು ಇಂದಿರಾ ವಿರುದ್ಧ ಹೋಗಿ, ರಾಜೀವ್ ಗಾಂಧಿ ವಿರುದ್ಧವೇ ಪಕ್ಷ ಕಟ್ಟಿದ್ದರು. ಅರಸರು ನಮ್ಮ ಪ್ರೀತಿಪಾತ್ರರಾಗಿದ್ದರು. ಆದರೂ ನಾವು ಅವರ ಹಿಂದೆ ಹೋಗಿರಲಿಲ್ಲ. ಪಕ್ಷದ ನಿಷ್ಟಾವಂತರಾಗಿಯೇ ಇದ್ದ ನಾವು ರಾಜ್ಯದಲ್ಲಿ ಅರಸು ಅವರ ವಿರುದ್ಧ ನಿಂತಿದ್ದೆವು. ಇದು ಹಿಂದಿನ ಇತಿಹಾಸ. ನಾವು ತೊಂದರೆಯಾದರೂ ಪಕ್ಷವನ್ನು ಬಿಡಲಿಲ್ಲ. ಪಕ್ಷಕ್ಕೆ ನಮ್ಮ ನಿಷ್ಟೆ ಹಾಗೆಯೇ ಇರುತ್ತದೆ. ಸಾಯುವವರೆಗೆ ನಾನು ಕಾಂಗ್ರೆಸ್ ಕಟ್ಟಾಳಾಗಿಯೇ ಇರುತ್ತೇನೆ. ಬಿಜೆಪಿಯತ್ತ ನಾವು ಮುಖ ಮಾಡುವವರಲ್ಲ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಪಕ್ಷದಲ್ಲಿ ಹಲವು ಸ್ಥಾನಮಾನ ಪಡೆದಿದ್ದೇನೆ. ನಾನು ಕನಸಿನಲ್ಲೂ ಮೋದಿಗೆ ಬೆಂಬಲ ಕೊಡುವನಲ್ಲ. ರಾಷ್ಟ್ರ ಮತ್ತು ಪಕ್ಷದ ಹಿತದೃಷ್ಟಿಯಿಂದ ತಳಮಟ್ಟ, ಬೂತ್ ಮಟ್ಟ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಯಾಗಬೇಕು ಎಂದು ಪತ್ರ ಬರೆದಿದ್ದೆವು. ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರೆದಿರುವುದಕ್ಕೆ ನನ್ನ ಸ್ವಾಗತವಿದೆ. ಪಕ್ಷದ ಘನತೆಯನ್ನು ಎತ್ತಿಹಿಡಿಯುವ ಕೆಲಸವನ್ನು ಸೋನಿಯಾ ಮಾಡಿದ್ದಾರೆ. ಪಕ್ಷದ ಮಟ್ಟಿಗೆ ಅವರು ತಾಯಿಯಿದ್ದಂತೆ. ನಮ್ಮ ಬೆಂಬಲ ಎಂದೆಂದಿಗೂ ಮುಂದುವರಿಯಲಿದೆ ಎಂದು ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

4 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

4 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

5 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago