Featured

ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ : ರಾಹುಲ್ ಗಾಂಧಿ – Vishwanews24

ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ವಾಲೆ ಇಂದು ನಂದಿಸಲಾಗುತ್ತಿರುವುದು ಅತ್ಯಂತ ದುಃಖದ ಸಂಗತಿ..

ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥವಾಗುವುದಿಲ್ಲ..

ನವದೆಹಲಿ: ರಾಷ್ಟ್ರರಾಜಧಾನಿಯ ಅಪ್ರತಿಮ ಹೆಗ್ಗುರುತಾಗಿರುವ ಇಂಡಿಯಾ ಗೇಟ್ ಹುಲ್ಲುಹಾಸಿನಲ್ಲಿ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿಯ ಜ್ವಾಲೆಯು ಶಾಶ್ವತವಾಗಿ ನಂದಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ವಾಲೆ ಇಂದು ನಂದಿಸಲಾಗುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥವಾಗುವುದಿಲ್ಲ. ಆದರೂ ಪರವಾಗಿಲ್ಲ ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇಂಡಿಯಾ ಗೇಟ್‍ನಿಂದ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಅಮರ್ ಜವಾನ್ ಜ್ಯೋತಿಯ ಜ್ವಾಲೆಯನ್ನು ನಂದಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1972ರ ಜನವರಿ 26 ರಂದು ಅಮರ್ ಜವಾನ್ ಜ್ಯೋತಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉದ್ಘಾಟಿಸಿದ್ದರು. ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಯೋಧರ ಮತ್ತು ಹುತಾತ್ಮರ ಸ್ಮಾರಕವಾಗಿದೆ. ಸ್ಮಾರಕದಲ್ಲಿರುವ ಗ್ರಾನೈಟ್ ಫಲಕಗಳ ಮೇಲೆ 25,942 ಸೈನಿಕರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

8 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

8 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

8 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

11 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

11 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

11 hours ago