ನವದೆಹಲಿ: ರಾಷ್ಟ್ರರಾಜಧಾನಿಯ ಅಪ್ರತಿಮ ಹೆಗ್ಗುರುತಾಗಿರುವ ಇಂಡಿಯಾ ಗೇಟ್ ಹುಲ್ಲುಹಾಸಿನಲ್ಲಿ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿಯ ಜ್ವಾಲೆಯು ಶಾಶ್ವತವಾಗಿ ನಂದಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ವಾಲೆ ಇಂದು ನಂದಿಸಲಾಗುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥವಾಗುವುದಿಲ್ಲ. ಆದರೂ ಪರವಾಗಿಲ್ಲ ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಇಂಡಿಯಾ ಗೇಟ್‍ನಿಂದ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಅಮರ್ ಜವಾನ್ ಜ್ಯೋತಿಯ ಜ್ವಾಲೆಯನ್ನು ನಂದಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1972ರ ಜನವರಿ 26 ರಂದು ಅಮರ್ ಜವಾನ್ ಜ್ಯೋತಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉದ್ಘಾಟಿಸಿದ್ದರು. ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಯೋಧರ ಮತ್ತು ಹುತಾತ್ಮರ ಸ್ಮಾರಕವಾಗಿದೆ. ಸ್ಮಾರಕದಲ್ಲಿರುವ ಗ್ರಾನೈಟ್ ಫಲಕಗಳ ಮೇಲೆ 25,942 ಸೈನಿಕರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …