Featured

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ

ಬೆಂಗಳೂರು: ನಾವು ಮಹಿಳಾ ಮೀಸಲಾತಿ ಪರವಾಗಿಯೇ ಇದ್ದೇವೆ. ಮೋದಿ ಅವರ ಹೇಳಿಕೆಯನ್ನ ವಿರೋಧಿಸ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ’ ಎನ್ನುವ ಪ್ರಧಾನಿ ಹೇಳಿಕೆಯನ್ನು ಖಂಡಿಸಿದರು. ಮಹಿಳಾ ಮೀಸಲಾತಿ ರಿಕರ್ವೇಶನ್ ಬಿಲ್ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಬಿಲ್ ಎರಡು ಬೇರೆ ಬೇರೆ, ಆದ್ರೆ ಇವರು ಬೇರೆ ರೀತಿ ಬಿಂಬಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ:

 

“ಕ್ಷೇತ್ರ ಪುನರ್ ವಿಂಗಡೆನೆ ಮಸೂದೆ ವಿಫಲವಾಗಿದೆ. ಇದು ಎಸ್ಸಿ-ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗುತ್ತೆ. ದಕ್ಷಿಣ ಭಾರತದ ರಾಜ್ಯಗಳಿಗೆ ವಿರುದ್ಧವಾಗಿದೆ. ಹಾಗಾಗಿ, ಇದನ್ನ ನಾವು ಎಲ್ಲಾ ಪಕ್ಷಗಳು ವಿರೋಧ ಮಾಡಿದ್ದೇವೆ” ಎಂದರು.

“ಮಹಿಳಾ ಮೀಸಲಾತಿ ಬಿಲ್ ಡಿಲಿಮೇಟೇಷನ್ ಬಿಲ್‌ಗೆ ವ್ಯತ್ಯಾಸವಿದೆ. ಮೋದಿ ಅವರು 2023 ರಲ್ಲಿ ನಾರಿ ಶಕ್ತಿ ಬಿಲ್ ಮಂಡನೆ ಮಾಡಿದ್ರು, ಇದಕ್ಕೆ ಎಲ್ಲಾ ಪಕ್ಷದ ನಾಯಕರು ಸಹಮತ ವ್ಯಕ್ತಪಡಿಸಿದ್ರು. 40 ತಿಂಗಳಾದ್ರೂ ಇದನ್ನ ಮೋದಿ ಯಾಕೆ ಮುಂಚೂಣಿಗೆ ತಂದಿರಲಿಲ್ಲ? ಏಕೆ ಅಧಿಸೂಚನೆ ಹೊರಡಿಸರಲಿಲ್ಲ? ಇದನ್ನ ನಾನು ಖಂಡಿಸ್ತಿನಿ. ಮೋದಿ ಅವರು ರಾಜಕೀಯ ದಾಳ ಉರುಳಿಸ್ತಿದ್ದಾರೆ. ನಾವು ಮಹಿಳಾ ಮೀಸಲಾತಿಯ ಪರವಾಗಿ ಇದ್ದೇವೆ. ಪ್ರಧಾನಿ ಮೋದಿ ಅವರ ಸುಳ್ಳು ಆರೋಪಗಳನ್ನು ಖಂಡಿಸುತ್ತೇನೆ. 2010 ರಲ್ಲಿ ಈ ಬಿಲ್ ರಾಜ್ಯಸಭೆಯಲ್ಲಿ ಮಂಡನೆ ಮಾಡಿದ್ವು ನಾವು, ಬಹುಮತ ಇಲ್ಲದೇ ಈ ಬಿಲ್ ಪಾಸ್ ಆಗಲಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ:

“ಬಿಜೆಪಿಯವರ ತತ್ವಸಿದ್ಧಾಂತ ಭಯಂಕರವಾಗಿದೆ. ನೆಹರು ಅವರು ಈ ಬಿಲ್ ಪಾಸ್ ಮಾಡೋಕೆ ಮುಂದಾಗಿದ್ರು. ಸರೋಜಿನಿ ನಾಯ್ಡು ನಮ್ಮ ಪಕ್ಷದ ಮೊದಲ ಮಹಿಳಾ ಅಧ್ಯಕ್ಷರಾಗಿದ್ರು, ಇಂದಿರಾ ಗಾಂಧಿಯವರು ಪ್ರಧಾನಿ ಆಗಿದ್ರು, ಸೋನಿಯಾ ಗಾಂಧಿ ಅವರು ಪಕ್ಷವನ್ನ ಮುನ್ನಡೆಸಿದ್ದಾರೆ. ನಾವು ಮಹಿಳೆಯರಿಗೆ ಆದ್ಯತೆ ಕೊಟ್ಟಿದ್ದೇವೆ. ಪ್ರಧಾನಿ ಮೋದಿಯವರ ಸುಳ್ಳು ಆರೋಪಗಳನ್ನ ಖಂಡಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

6 hours ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

6 hours ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

6 hours ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

6 hours ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

1 day ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

1 day ago