Featured

ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿ ದೊರಕುವುದಿಲ್ಲ : ಪ್ರಿಯಾಂಕ್ ಖರ್ಗೆ – vishwanews24

ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ..

ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ..

ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ..

ಯಾವ ಧರ್ಮದಲ್ಲಿಯೂ  ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ..

ಬಿಜೆಪಿ ವಿರುದ್ಧ ಪ್ರಿಯಾಂಕ್‌  ಖರ್ಗೆ  ವಾಗ್ದಾಳಿ

ಬೆಂಗಳೂರು: ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ ? ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ ಎಂದು ಹೇಳಿದ್ದಾರೆ.

“ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?“ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಬಿಜೆಪಿಗರಿಗೆ ಇದೆಯೇ? ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ. ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ? ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ? ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ? ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

”ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ, ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ, ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ. ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ, ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ ಎಂದಿದ್ದಾರೆ.

ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ, ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ. ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ಸವಾಲೆಸೆದಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

17 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

17 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

17 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

17 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

18 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

18 hours ago