ಉಡುಪಿ: ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಈಗ ಮಂತ್ರಿಯಾಗಿದ್ದಾರೆ. ಅವರಿಗಿಂತ ರಾಜಕೀಯದಲ್ಲಿ ಕಿರಿಯರು ಇದೀಗಲೇ ಡಿಸಿಎಂ ಆಗಿದ್ದು ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ ಒಂದು ವೇಳೆ ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗುಡುಗಿದ್ದಾರೆ.
ಅವರು ಉಡುಪಿ ನಗರದ ಅಜ್ಜರಕಾಡಿನ ಪುರಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡಿದರು. ಈಶ್ವರಪ್ಪನಿಗೆ ಯಾವುದೇ ಬದ್ಧತೆ ಇಲ್ಲ. ಅಹಿಂದ ಪರ ಒಂದೇ ಒಂದು ಹೋರಾಟ ಮಾಡಿದ ಇತಿಹಾಸವಿಲ್ಲ. ಈಶ್ವರಪ್ಪನಿಗೆ ಗಂಭೀರತೆಯಿಲ್ಲ ಅವರು ಗಹನವಾಗಿ ಮಾತನಾಡಲ್ಲ ಎಂದರು.
ಬಿಜೆಪಿ, ಜೆಡಿಎಸ್ ಉಪಚುನಾವಣೆ ಒಳ ಒಪ್ಪಂದ ವಿಚಾರದಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಇವರಲ್ಲಿ ಯಾರು ಸತ್ಯ ಮಾತನಾಡುತ್ತಾರೆ ಯಾರು ಸುಳ್ಳು ಹೇಳುತ್ತಾರೆ ಗೊತ್ತಾಗುವುದಿಲ್ಲ. ಈ ಗೊಂದಲ ಸೃಷ್ಟಿ ಮಾಡಿದ್ದು ಜೆಡಿಎಸ್ ಪಕ್ಷದವರು. ಕುಮಾರಸ್ವಾಮಿ ಹೇಳಿಕೆ ಗಳು ಅವಮಾನಕ್ಕೆ ಕಾರಣವಾಗಿವೆ. ಮುಂದೆ ಏನು ಮಾಡುತ್ತಾರೊ ಅದು ಅವರಿಗೆ ಬಿಟ್ಟದ್ದು. ನಾವು ಮಾತ್ರ ಬಿಜೆಪಿ ವಿರುದ್ಧ ನಿರಂತರ ಹೋರಾಟ ಮಾಡುತ್ತೇವೆ ಎಂದರು.
ಜೆಡಿಎಸ್ ಪಕ್ಷಕ್ಕೆ ಒಂದು ಸ್ಪಷ್ಟವಾದ ನಿಲುವು, ಸಿದ್ಧಾಂತವೇ ಇಲ್ಲ. ಜೆಡಿಎಸ್ ಒಮ್ಮೆ ಯಾರೊಂದಿಗೂ ಸ್ನೇಹ ಬೆಳೆಸುತ್ತಾರೆ, ಇನ್ನೊಮ್ಮೆ ಯಾರೊಂದಿಗೂ ದ್ವೇಷ ಸಾಧಿಸುತ್ತಾರೆ. ಸಹಾಯ ಮಾಡಿದವರ ಜೊತೆ ಹೋಗುವ ಪಾರ್ಟಿ ಅದು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…