ಬೆಂಗಳೂರು : ”ಕೊರೊನಾ ಲಾಕ್‌ಡೌನ್ ಸಂದರ್ಭ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಳಿ ಚರ್ಚೆ ನಡೆಸುತ್ತೇನೆ. ಈ ಸಂದರ್ಭ ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು” ಎಂದು ಸಚಿವ ಸೋಮಣ್ಣ ಹೇಳಿದರು.
ಹೆಬ್ಬಾಳ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ನಾವು ಕೆಲವು ದಿನ ಪರಿಸ್ಥಿತಿ ಅವಲೋಕನ ಮಾಡುತ್ತೇವೆ. ನಾವು ಶಾಸಕರು ನಮ್ಮ ಕ್ಷೇತ್ರದಲ್ಲೇ ಕಷ್ಟದಲ್ಲಿರುವ ಜನರಿಗೆ ನೆರವು ನೀಡುತ್ತೇವೆ. ಪರಿಹಾರ ನೀಡುವಂತೆ ಸಿಎಂಗೂ ಆಗ್ರಹ ಮಾಡುತ್ತೇವೆ. ಈಗಾಗಲೇ ಡಿ ಕೆ ಶಿವಕುಮಾರ್ ಅವರು ಸರ್ಕಾರ ಪ್ಯಾಕೇಜ್ ಘೋಷಿಸಿಲ್ಲ ಎಂದು ಟೀಕಿಸಿ, ಘೋಷಣೆಗೆ ಆಗ್ರಹಿಸಿದ್ದಾರೆ. ಆರೋಪ, ಟೀಕೆ ಮಾಡುವುದು ವಿಪಕ್ಷವಾದ ಅವರಿಗೆ ಬಿಟ್ಟ ವಿಚಾರ. ನಾವು ನಮ್ಮ ಕರ್ತವ್ಯ ಏನಿದೆ ಅದನ್ನು ಮಾಡುತ್ತೇವೆ” ಎಂದರು.
ಉಡುಪಿ: ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ -Vishwanews24
ಇನ್ನು ”ಜನರು ಗುಳೆ ಹೋಗುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಜನರಲ್ಲಿ ಗಾಬರಿ, ಗೊಂದಲವಿರುವ ಹಿನ್ನೆಲೆ ಬೆಂಗಳೂರು ಬಿಟ್ಟು ತಮ್ಮ ಊರುಗಳಿಗೆ ವಾಪಾಸ್ ತೆರಳುತ್ತಿದ್ದಾರೆ. ಈ ಹಿನ್ನೆಲೆ ನಾವು ಏನು ಮಾಡುವುದು ಎಂದು ಕೂಡಾ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.
”ಖಾಸಗಿ ಆಸ್ಪತ್ರೆಗಳಲ್ಲಿ ಶೋಷಣೆ, ಹಣ ವಸೂಲಿ ನಮ್ಮ ಗಮನಕ್ಕೆ ಬಂದರೆ ಸರಿ ಮಾಡಬಹುದು. ಎಲ್ಲವನ್ನೂ ನಮ್ಮಿಂದ ಸರಿ ಮಾಡಲು ನಮ್ಮಿಂದ ಆಗದು. ನಾವು ಯಾರೂ ಕೂಡಾ ಎಲ್ಲವನ್ನೂ ಸರಿ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ಮಂಗಳೂರು: ಪ್ರಥಮ ಡೋಸ್ ಲಸಿಕೆ ಪಡೆದಿದ್ದ ಹತ್ತು ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…