Featured

ನಾವು ವಿಶ್ವಾಸಮತ ಯಾಚನೆಗೆ ಮಾಡುವುದಕ್ಕೆ ಮುಂದಾಗಿದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸವೂ ಇದೆ : ದಿನೇಶ್ ಗುಂಡೂರಾವ್ -Vishwanews24

ಬೆಂಗಳೂರು: ನಾವು ವಿಶ್ವಾಸಮತ ಯಾಚನೆಗೆ ಮಾಡುವುದಕ್ಕೆ ಮುಂದಾಗಿದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಹೇಳಿದರು

ಕೆಕೆ ಗೆಸ್ಟ್ ಹೌಸ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇಗ್ ಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿಸಿ ಬಿಜೆಪಿ ನಾಯಕರೇ ಅವರ ಜೊತೆಗೆ ಇದ್ದರು. ಬಿಜೆಪಿ ಯಾವ ಮಟ್ಟಕ್ಕೆ ಇಳಿದಿದೆ ಎಂದು ಇದರಿಂದ ಸ್ಪಷ್ಟವಾಗಿ ಗೊತ್ತಾಗ್ತಿದೆ.  ಅವರಿಗೆ ಸರ್ಕಾರ ಉರುಳಿಸಬೇಕು ಎಂಬುದೇ ಉದ್ದೇಶವಾಗಿದೆ ಎಂದು ದೂರಿದರು.

ಐಎಂಎ ಪ್ರಕರಣದಲ್ಲಿ ಬಿಜೆಪಿ ಹೋರಾಟ ನಡೆಸಿತ್ತು. ಈಗ ರೋಷನ್​ ಬೇಗ್​ ಅವರನ್ನು ಕರೆದುಕೊಂಡು ಹೋಗುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ರೋಷನ್​ ಬೇಗ್​ ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಗೊತ್ತಿಲ್ಲ  ಎಂದು​ ಗುಂಡೂರಾವ್​ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಯೇ ಸಾಕು. ನಮ್ಮ ಶಾಸಕರನ್ನು ಸೆಳೆಯಲು ಎಂತಹ ಕೆಲಸ ಮಾಡಿದ್ದಾರೆ ಎಂದು ಆ ಹೇಳಿಕೆ ಹಿಂದೆ ಏನ್ ಇದೆ ಅಂತ ಗೊತ್ತಾಗ್ತಿದೆ ಎಂದರು.

ಯಡಿಯೂರಪ್ಪ ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡ್ತಿದ್ದಾರೆ. ಶಾಸಕರ ಅನರ್ಹತೆ ಮಾಡುವುದಕ್ಕೆ ಬಿಜೆಪಿಯೇ ಮುಂದಾಗಿದೆ. ಶಾಸಕರು ಯಾಕೆ ರಾಜೀನಾಮೆ ನೀಡುತ್ತಿದ್ದಾರೆ ಅಂತ ಬಿಜೆಪಿ ನಡೆಯಿಂದ ಗೊತ್ತಾಗ್ತಿದೆ ಎಂದು ತಿರುಗೇಟು ನೀಡಿದರು.

ನಾವು ವಿಶ್ವಾಸಮತಯಾಚನೆ ಮಾಡುವುದಕ್ಕೆ ಮುಂದಾಗಿದ್ದೇವೆ, ನಮಗೆ ವಿಶ್ವಾಸ ಇದೆ. ನಮ್ಮಲ್ಲಿ ಗೊಂದಲ ಇರಬಾರದು ಅದಕ್ಕೆ ನಾವು ವಿಶ್ವಾಸಮತಯಾಚನೆಗೆ ಮುಂದಾಗಿದ್ದೇವೆ. ನಮಗೆ ವಿಶ್ವಾಸ ಇದೆ ನಾವು ಗೆಲ್ಲುತ್ತೇವೆ . ಸುಪ್ರೀಂಕೋರ್ಟ್​ ತೀರ್ಪಿನ ಮೇಲೆ ರಾಜ್ಯದ ರಾಜಕೀಯ ಬೆಳವಣಿಗೆ ನಿಂತಿದೆ ಎಂದು ಹೇಳಿದರು ..

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago