ಬೆಂಗಳೂರು :ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದೇವೆ, ಅನರ್ಹ ಶಾಸಕರು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅವರು ಬಿಜೆಪಿ ಜೊತೆ ಸೇರಿಕೊಂಡು ರಾಜಕಾರಣ ರೂಪಿಸಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಡೂರಾವ್ ಹೇಳಿದರು.
ಇವತ್ತಿನ ಸರ್ಕಾರ ಸತ್ತು ಬಿದ್ದಿದೆ. ಹಿಂದಿನ ಸರ್ಕಾರದ ಯೋಜನೆಗಳನ್ನು ತನಿಖೆ ಮಾಡುವುದರಲ್ಲಿಯೇ ಹೆಚ್ಚು ತಲ್ಲೀನವಾಗಿದೆ. ಮೈತ್ರಿ ಹಾಗೂ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಕೇಂದ್ರದವರು ಸಿಎಂಗೆ ಮರ್ಯಾದೆ ಕೊಡುತ್ತಿಲ್ಲ. ಈ ಸರ್ಕಾರ ಬಂದ ಮೇಲೆ ಜನರಿಗೆ ಭ್ರಮ ನಿರಸನ ಆಗಿದೆ ಎಂದು ವ್ಯಂಗ್ಯವಾಡಿದರು.
ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸುವ ಬಯಕೆ ಹೊಂದಿದ್ದರೆ ಅವರ ಇಚ್ಚೆ. ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದೇವೆ. ಅನರ್ಹ ಶಾಸಕರ ಪ್ರಕರಣದಲ್ಲಿ ರಮೇಶ್ ಕುಮಾರ್ ಕಾನೂನಾತ್ಮಕವಾಗಿಯೇ ಕ್ರಮ ಕೈಗೊಂಡಿದ್ದಾರೆ. ಅವರ ಆದೇಶವನ್ನು ಯಾವ ಕೋರ್ಟ್’ಗಳು ಏಕಾ ಏಕಿ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಅನರ್ಹ ಶಾಸಕರಿಗೆ ಬಿಜೆಪಿಯನ್ನು ನಂಬದಂತೆ ಹೇಳಿದ್ದೆ. ಕಾಂಗ್ರೆಸ್’ನಲ್ಲಿ ರಾಜರಾಗಿದ್ದರು. ಈಗ ಅವರ ಪರಿಸ್ಥಿತಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ. ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅವರು ಬಿಜೆಪಿ ಜೊತೆ ಸೇರಿಕೊಂಡು ರಾಜಕಾರಣ ರೂಪಿಸಿಕೊಳ್ಳಲಿ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…