Featured

ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದೇವೆ : ದಿನೇಶ್ ಗುಡೂರಾವ್ -Vishwanews24

ಬೆಂಗಳೂರು :ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದೇವೆ,  ಅನರ್ಹ ಶಾಸಕರು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅವರು ಬಿಜೆಪಿ ಜೊತೆ ಸೇರಿಕೊಂಡು ರಾಜಕಾರಣ ರೂಪಿಸಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಡೂರಾವ್ ಹೇಳಿದರು.

ಇವತ್ತಿನ ಸರ್ಕಾರ ಸತ್ತು ಬಿದ್ದಿದೆ. ಹಿಂದಿನ ಸರ್ಕಾರದ ಯೋಜನೆಗಳನ್ನು ತನಿಖೆ ಮಾಡುವುದರಲ್ಲಿಯೇ ಹೆಚ್ಚು ತಲ್ಲೀನವಾಗಿದೆ. ಮೈತ್ರಿ ಹಾಗೂ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಕೇಂದ್ರದವರು ಸಿಎಂಗೆ ಮರ್ಯಾದೆ ಕೊಡುತ್ತಿಲ್ಲ. ಈ ಸರ್ಕಾರ ಬಂದ ಮೇಲೆ ಜನರಿಗೆ ಭ್ರಮ ನಿರಸನ ಆಗಿದೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸುವ ಬಯಕೆ ಹೊಂದಿದ್ದರೆ ಅವರ ಇಚ್ಚೆ. ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದೇವೆ. ಅನರ್ಹ ಶಾಸಕರ ಪ್ರಕರಣದಲ್ಲಿ ರಮೇಶ್ ಕುಮಾರ್ ಕಾನೂನಾತ್ಮಕವಾಗಿಯೇ ಕ್ರಮ ಕೈಗೊಂಡಿದ್ದಾರೆ. ಅವರ ಆದೇಶವನ್ನು ಯಾವ ಕೋರ್ಟ್’ಗಳು ಏಕಾ ಏಕಿ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಅನರ್ಹ ಶಾಸಕರಿಗೆ ಬಿಜೆಪಿಯನ್ನು ನಂಬದಂತೆ ಹೇಳಿದ್ದೆ. ಕಾಂಗ್ರೆಸ್’ನಲ್ಲಿ ರಾಜರಾಗಿದ್ದರು. ಈಗ ಅವರ ಪರಿಸ್ಥಿತಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ. ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅವರು ಬಿಜೆಪಿ ಜೊತೆ ಸೇರಿಕೊಂಡು ರಾಜಕಾರಣ ರೂಪಿಸಿಕೊಳ್ಳಲಿ ಎಂದು ಹೇಳಿದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago