ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಆದ ಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ . ಬಿಜೆಪಿ ಶಾಸಕರಾದ ಹರೀಶ್ ಪೂಂಜ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಶಾಸಕ, ಸಂಸದರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ನೀಡಿದ ಹೇಳಿಕೆ ಮೇಲೆ ಕ್ರಮ ಕೈಗೊಂಡಿಲ್ಲ ಎಂದರು.
ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ಹಗರಣದಲ್ಲಿ ಇದ್ದರು. ಆದರೆ ಎಸ್ಐಟಿ ಚಾರ್ಜ್ಶೀಟ್ನಲ್ಲಿ ಅವರ ಹೆಸರೇ ಇಲ್ಲ.ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು.
ಗಣೇಶ ಮೂರ್ತಿಯನ್ನೇ ಪೊಲೀಸ್ ವ್ಯಾನ್ನಲ್ಲಿ ಕರೆದುಕೊಂಡು ಹೋದರು. ಇದು ದೇಶದಲ್ಲೇ ಮೊದಲು. ಗಣಪತಿಗೇ ವಿಘ್ನ ಮಾಡಿದರು. ಚಪ್ಪಲಿ ಬಿಸಾಡಿದರು, ಕಲ್ಲು ಎಸೆದರು, 25 ಅಂಗಡಿ ಸುಟ್ಟು ಹಾಕಿದರು. ಅವರಿಗೆ ಎಲ್ಲಿಂದ ಶಕ್ತಿ ಬಂತು? ಕೇರಳದವರು ಬಂದಿದ್ದಾರೆ ಎಂದು ಗೊತ್ತಾಗಿದೆ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಎಫ್ಐಆರ್ ಹಾಕಿದೆ, ಅದನ್ನು ನಾವು ಎದುರಿಸುತ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸುತ್ತೇವೆ. . ಇದನ್ನೆಲ್ಲಾ ಕಾನೂನು ಮೂಲಕವೇ ಎದುರಿಸುತ್ತೇವೆ ಎಂದು ಹೇಳಿದರು.
ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ. ಅವರು ತಪ್ಪು ಮಾಡಿದ್ದರೆ ಕ್ರಮ ಆಗಲಿ. ನಾವು ತಪ್ಪು ಮಾಡಿದ ಯಾರನ್ನೂ ರಕ್ಷಣೆ ಮಾಡಲ್ಲ. ಆದರೆ ಸರಕಾರ ದ್ವೇಷದ ರಾಜಕೀಯ ಮಾಡುವುದು ಬೇಡ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…