ನಾವೆಲ್ಲರೂ ಸೇರಿ ನಮ್ಮ ಭಾಷೆಯಾದ ತುಳು ವಿಗೆ ರಾಜ್ಯದಲ್ಲಿ ಸೂಕ್ತ ಸ್ಥಾನಮಾನ ಕೊಡಿಸುತ್ತೇವೆ : ನಳಿನ್ ಕುಮಾರ್ ಭರವಸೆ -Vishwanews24
ಮಂಗಳೂರು: ತುಳು ಭಾಷೆಗೆ ಅಧಿಕೃತವಾಗಿ ಮಾನ್ಯತೆ ಕೊಡಿಸುವ ಪ್ರಕ್ರಿಯೆ ಪ್ರಗತಿ ಹಂತದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರಕಾರವಿರುವ ಕಾರಣ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಎಲ್ಲಾ ಪ್ರಯತ್ನಗಳನ್ನು ಬಿಜೆಪಿ ಮಾಡುತ್ತಿದೆ. ಈ ಕಾರ್ಯ ಪ್ರಗತಿಯಲ್ಲಿದೆ ಎಂದು ಭರವಸೆ ನೀಡಿದರು.
ಕರಾವಳಿ ಭಾಗದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಾವೆಲ್ಲರೂ ಸೇರಿ ನಮ್ಮ ಭಾಷೆಗೆ ರಾಜ್ಯದಲ್ಲಿ ಸೂಕ್ತ ಸ್ಥಾನಮಾನ ಕೊಡಿಸುತ್ತೇವೆ ಎಂದು ತಿಳಿಸಿದರು.
