ಬೆಂಗಳೂರು : ನನಗೂ ಹಾಗೂ ಸಿದ್ಧರಾಮಯ್ಯ ನಡುವೆ ಯಾವುದೇ ಶತೃತ್ವವಿದೆ ಎಂದು ಅನಗತ್ಯವಾದ ಗೊಂದಲ ಉಂಟು ಮಾಡುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ವೇಳೆ ನನಗೆ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೆಹಲಿಗೆ ತೆರಳಿ ಅವರ ಆರೋಗ್ಯ ಹಾಗೂ ಪರಿಸ್ಥಿತಿ ವಿಚಾರಿಸಿದೆ. ಇದೇ ಸಂದರ್ಭದಲ್ಲಿ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಬಲವಾಗಿದೆ. ಅದನ್ನು ಇನ್ನಷ್ಟು ಬಲಿಷ್ಠಗೊಳಿಸಿ ಎಂದು ಸೋನಿಯಾಗಾಂಧಿ ಅವರು ಸಲಹೆ ನೀಡಿದರು. ಇದು ಬಿಟ್ಟರೆ ಬೇರಾವುದನ್ನು ಚರ್ಚೆ ಮಾಡಲಿಲ್ಲ. ಎಂದರು.
ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಶತೃತ್ವ ಇರುವಂತೆ ಬಿಂಬಿಸಿರುವ ಹಿಂದೆ ಯಾರದ್ದೋ ಕೈವಾಡವಿದೆ ಎಂದೆನಿಸುತ್ತದೆ. ನಾನು ಮೂಲತಹ ಕಾಂಗ್ರೆಸ್‍ನವನು. ಕೊನೆಯವರೆಗೂ ಇಲ್ಲಿಯೇ ಉಳಿಯುತ್ತೇವೆ. ಕಾಂಗ್ರೆಸ್‍ನಲ್ಲಿ ಇರುವ ಪ್ರತಿಯೊಬ್ಬರೂ ಪಕ್ಷದ ಸಿದ್ಧಾಂತವನ್ನು ಒಪ್ಪಿದವರೇ ಆಗಿದ್ದಾರೆ. ಇಲ್ಲಿ ಹೊರಗಿಂದ ಬಂದವರು, ಮೂಲ ಕಾಂಗ್ರೆಸ್‍ನವರು ಎಂಬ ಬೇಧವಿಲ್ಲ. ಇಲ್ಲಿ ಎಲ್ಲರೂ ಕಾಂಗ್ರೆಸ್‍ನವರೆ. ನಮ್ಮೆಲ್ಲರ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಹೇಳಿದರು.
ನಾವೆಲ್ಲಾ ಒಟ್ಟಿಗೆ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತರುವತ್ತ ಕೆಲಸ ಮಾಡಲಿದ್ದೇವೆ. ಒಬ್ಬರೇ ಪಕ್ಷ ಬೆಳೆಸುತ್ತೇವೆ ಎಂದುಕೊಳ್ಳುವುದು ತಪ್ಪು. ನಮ್ಮೆಲ್ಲರ ಮಧ್ಯೆ ಆ ಒಮ್ಮತವಿದೆ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…