Featured

ನಾವೆಲ್ಲಾ ಒಟ್ಟಿಗೆ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತರುವತ್ತ ಕೆಲಸ ಮಾಡಲಿದ್ದೇವೆ :ಪರಮೇಶ್ವರ್ -Vishwanews24

ಬೆಂಗಳೂರು : ನನಗೂ ಹಾಗೂ ಸಿದ್ಧರಾಮಯ್ಯ ನಡುವೆ ಯಾವುದೇ ಶತೃತ್ವವಿದೆ ಎಂದು ಅನಗತ್ಯವಾದ ಗೊಂದಲ ಉಂಟು ಮಾಡುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ವೇಳೆ ನನಗೆ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೆಹಲಿಗೆ ತೆರಳಿ ಅವರ ಆರೋಗ್ಯ ಹಾಗೂ ಪರಿಸ್ಥಿತಿ ವಿಚಾರಿಸಿದೆ. ಇದೇ ಸಂದರ್ಭದಲ್ಲಿ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಬಲವಾಗಿದೆ. ಅದನ್ನು ಇನ್ನಷ್ಟು ಬಲಿಷ್ಠಗೊಳಿಸಿ ಎಂದು ಸೋನಿಯಾಗಾಂಧಿ ಅವರು ಸಲಹೆ ನೀಡಿದರು. ಇದು ಬಿಟ್ಟರೆ ಬೇರಾವುದನ್ನು ಚರ್ಚೆ ಮಾಡಲಿಲ್ಲ. ಎಂದರು.

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಶತೃತ್ವ ಇರುವಂತೆ ಬಿಂಬಿಸಿರುವ ಹಿಂದೆ ಯಾರದ್ದೋ ಕೈವಾಡವಿದೆ ಎಂದೆನಿಸುತ್ತದೆ. ನಾನು ಮೂಲತಹ ಕಾಂಗ್ರೆಸ್‍ನವನು. ಕೊನೆಯವರೆಗೂ ಇಲ್ಲಿಯೇ ಉಳಿಯುತ್ತೇವೆ. ಕಾಂಗ್ರೆಸ್‍ನಲ್ಲಿ ಇರುವ ಪ್ರತಿಯೊಬ್ಬರೂ ಪಕ್ಷದ ಸಿದ್ಧಾಂತವನ್ನು ಒಪ್ಪಿದವರೇ ಆಗಿದ್ದಾರೆ. ಇಲ್ಲಿ ಹೊರಗಿಂದ ಬಂದವರು, ಮೂಲ ಕಾಂಗ್ರೆಸ್‍ನವರು ಎಂಬ ಬೇಧವಿಲ್ಲ. ಇಲ್ಲಿ ಎಲ್ಲರೂ ಕಾಂಗ್ರೆಸ್‍ನವರೆ. ನಮ್ಮೆಲ್ಲರ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಹೇಳಿದರು.

ನಾವೆಲ್ಲಾ ಒಟ್ಟಿಗೆ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತರುವತ್ತ ಕೆಲಸ ಮಾಡಲಿದ್ದೇವೆ. ಒಬ್ಬರೇ ಪಕ್ಷ ಬೆಳೆಸುತ್ತೇವೆ ಎಂದುಕೊಳ್ಳುವುದು ತಪ್ಪು. ನಮ್ಮೆಲ್ಲರ ಮಧ್ಯೆ ಆ ಒಮ್ಮತವಿದೆ ಎಂದು ಸ್ಪಷ್ಟಪಡಿಸಿದರು.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

4 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

4 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

4 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

5 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

6 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

6 hours ago