ಬೆಂಗಳೂರು: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ನನ್ನ ಪ್ರಕಾರ ದಸ್ತಗಿರಿ ಮಾಡುವುದೇ ದೊಡ್ಡ ಅಪರಾಧವಾಗಿದೆ. ಕೊಲೆ, ದರೋಡೆ ಮಾಡಿದವರು ಸಾಕ್ಷಿ ನಾಶ ಮಾಡುತ್ತಾರೆ ಎಂದು ದಸ್ತಗಿರಿ ಮಾಡುತ್ತಾರೆ. ಈ ದಸ್ತಗಿರಿ ರಾಜಕೀಯ ಪ್ರೇರಿತವಾಗಿದೆ. ಚಿದಂಬರಂ ಹಾಗೂ ಡಿಕೆಶಿ ಇಬ್ಬರ ಬಂಧನವೂ ರಾಜಕೀಯ ಪ್ರೇರಿತವಾಗಿದ್ದು, ಇದು ಒಳ್ಳೆಯದಲ್ಲ ಎಂದು ಕಿಡಿಕಾರಿದರು.
ರಾಜಕೀಯ ಪ್ರೇರಿತ, ದ್ವೇಷದಿಂದ ಕೂಡಿದೆ. ತಪ್ಪು ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಸಮನ್ಸ್ ಕೊಟ್ಟು ಅಟೆಂಡ್ ಆಗದೆ ಹೋದರೆ ದಸ್ತಗಿರಿ ಮಾಡಲಿ. ಆದರೆ ಡಿಕೆಶಿ ಕರೆದಾಗೆಲ್ಲ ಹೋಗಿದ್ದಾರೆ. ಹಬ್ಬದ ದಿನವೂ ಬಿಟ್ಟಿಲ್ಲ. ಪಾಪ ಡಿಕೆಶಿ ಕಣ್ಣೀರೇ ಹಾಕಿಬಿಟ್ಟರು. ಎಷ್ಟು ಅಮಾನವೀಯ ಇದು ಎಂದು ಪ್ರಶ್ನಿಸಿದ್ದಾರೆ.
ನಾಲ್ಕು ದಿನವೂ ಇಡಿ ವಿಚಾರಣೆಗೆ ಡಿಕೆಶಿ ಹೋಗಿದ್ದಾರೆ. ಸಂಪೂರ್ಣ ರಾಜಕೀಯ ಸೇಡಿನ ಕ್ರಮ ಇದು. ಕಾಂಗ್ರೆಸ್ ಪಕ್ಷ ಇದನ್ನು ಸಹಿಸುವುದಿಲ್ಲ. ಪಕ್ಷದ ವತಿಯಿಂದ ಹೋರಾಟ ಮಾಡುತ್ತೇವೆ. ನಾವೆಲ್ಲ ಡಿಕೆಶಿ ಜೊತೆಗಿದ್ದೇವೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಮತ್ತಷ್ಟು ಕೈ ಮುಖಂಡರನ್ನ ಕೇಂದ್ರ ಟಾರ್ಗೆಟ್ ಮಾಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಾಡಲಿ, ಕಾಂಗ್ರೆಸ್ ಅದಕ್ಕೆಲ್ಲ ಹೆದರಲ್ಲ. ಇದು ಜನರಿಗೆ ಅರ್ಥವಾಗುತ್ತಿದೆ. ರಾಷ್ಟ್ರ ಮತ್ತು ರಾಜ್ಯದಲ್ಲೂ ಈ ಬಗ್ಗೆ ಕಾಂಗ್ರೆಸ್ ಧ್ವನಿ ಎತ್ತಲಿದೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…