Featured

ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ : ಹೆಚ್‌ಡಿ ಕುಮಾರಸ್ವಾಮಿ -Vishwanews24

ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ : ಹೆಚ್‌ಡಿ ಕುಮಾರಸ್ವಾಮಿ -Vishwanews24

ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ

ಬೆಂಗಳೂರು : ”ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ” ಎಂದು ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

”ಜೆಡಿಎಸ್‌ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ, ಜೆಡಿಎಸ್‌ ಬಿಜೆಪಿ ವಿಲೀನವಾಗುತ್ತದೆ” ಎಂಬ ಸುದ್ದಿಗಳಿಗೆ ಸಂಬಂಧಿಸಿ ಸರಣಿ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿರುವ ಅವರು, ”ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ” ಎಂದು ತಿಳಿಸಿದ್ದಾರೆ.

‘ರೈತರ ಸಾಲಮನ್ನಾ’, ‘ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

9 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

10 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

10 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago