Featured

ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ :  ಹೆಚ್‌ಡಿಕೆ ವಾಗ್ದಾಳಿ – vishwanews24

ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? :  ಹೆಚ್‌ಡಿಕೆ ವಾಗ್ದಾಳಿ

ಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಗಾಗಿ ಜೆಡಿಎಸ್‌ನಿಂದ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಸೆಳೆಯೋ ಪ್ರಯತ್ನ ನಡೆಯುತ್ತಿದೆ ಎಂಬ ಸಿಎಂ ಡಿಕೆ ಶಿವಕುಮಾರ್ ಆರೋಪದ ವಿಚಾರವಾಗಿ ಮಾತನಾಡಿದ ಅವರು, “ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ. ನಮ್ಮ ಪಕ್ಷದಲ್ಲಿ, ನಮ್ಮ ಕೈಯಲ್ಲಿ ಮಾಡೋಕೆ ಏನಿದೆ? ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲ ಇಟ್ಟುಕೊಂಡಿದ್ದಾರೆ. ಅವರ ವಿರುದ್ಧ ನಾವು ಫೈಟ್ ಮಾಡೋಕೆ ಆಗುತ್ತಾ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಪಕ್ಷದ ಮತಗಳು ಚೆಲ್ಲಾಪಿಲ್ಲಿ ಆಗಬಾರದು. ನಮ್ಮ ಮತ ಒಟ್ಟಾಗಿ ಇರಬೇಕು ಅಂತ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. ಕುತಂತ್ರ ಮಾಡಿ ಗೆದ್ದೇ ಬಿಡಬೇಕು ಅನ್ನೋ ಪ್ರಶ್ನೆ ಇಲ್ಲ. ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಯಿಂದ ಮತ ಕೊಡಿ ಅಂತ ಕೇಳಿದ್ದಾರೆ. ಇದನ್ನ ಹೊರತುಪಡಿಸಿ ಇನ್ನೇನಿದೆ. ನಮ್ಮ ವೋಟ್ ಜೊತೆ ಬಿಜೆಪಿ ವೋಟ್ ಇದೆ. ಅದಕ್ಕೆ ಮನವಿ ಮಾಡಿದ್ದೇವೆ. ನಮ್ಮ ವೋಟ್ ಭದ್ರ ಮಾಡೋಕೆ ಅಭ್ಯರ್ಥಿ ಹಾಕಿದ್ದೇವೆ” ಎಂದು ತಿಳಿಸಿದರು.

Vishwa News 24

Recent Posts

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

39 minutes ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

1 hour ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

1 hour ago

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

2 hours ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

3 hours ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

3 hours ago