Featured

ನಾಸಾದ ಗಗನಯಾತ್ರಿಗಳ ಪಟ್ಟಿಯಲ್ಲಿ ಭಾರತ ಮೂಲದ ಅನಿಲ್ ಮೆನನ್ ಸೇರ್ಪಡೆ – Vishwanews24

ನಾಸಾದ ಗಗನಯಾತ್ರಿಗಳ ಪಟ್ಟಿಯಲ್ಲಿ ಭಾರತ ಮೂಲದ ಅನಿಲ್ ಮೆನನ್ ಆಯ್ಕೆ – Vishwanews24

ವಾಷಿಂಗ್ಟನ್ : ಅಮೇರಿಕಾದ ಬಾಹ್ಯಾಕಾಶ ಸಂಸ್ಥೆಯಾಗಿರುವ ನಾಸಾ, ತನ್ನ ಚಂದ್ರನ ಸಂಶೋಧನೆಗಾಗಿ 10 ತರಬೇತಿ ಗಗನಯಾತ್ರಿಗಳನ್ನು ಆಯ್ಕೆ ಮಾಡಿದ್ದು, ಈ ಯೋಜನೆಯಲ್ಲಿ ಭಾರತೀಯ ಮೂಲದ ಅನಿಲ್‌‌ ಮೆನನ್‌ ಅವರು ಸೇರ್ಪಡೆಯಾಗಿದ್ದಾರೆ.

45 ವರ್ಷದ ಅನಿಲ್‌ ಮನನ್‌ ಅವರು ನಾಸಾದ ಸ್ಪೇಸ್‌‌ ಎಕ್ಸ್‌‌ ಕಾರ್ಯಾಚರಣೆಯಲ್ಲಿ ಫ್ಲೈಟ್‌‌‌ ಸರ್ಜನ್‌‌ ಆಗಿ ಕಾರ್ಯ ನಿರ್ವಹಿಸಿದ್ದರು. ಅನಿಲ್‌ ಅವರು ಅಮೇರಿಕಾ ವಾಯುಪಡೆಯಲ್ಲಿ ಲೆಫ್ಟಿನೆಂಟ್‌ ಕರ್ನಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಾಸಾದ ಮೂನ್‌ ಮಿಷನ್‌ಗೆ 12 ಸಾವಿರ ಅರ್ಜಿಗಳು ಬಂದಿದ್ದು, ಆ ಪೈಕಿ 10 ಮಂದಿ ಮಾತ್ರ ತರಬೇತಿಗೆ ಆಯ್ಕೆಯಾಗಿದ್ದಾರೆ. ಈ ತಂಡ ಮತ್ತೆ ಎರಡು ವರ್ಷಗಳ ತರಬೇತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ನಾಸಾದ ಎಲ್ಲಾ ರೀತಿಯ ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ಅವರೆಲ್ಲರೂ ನಾಸಾದ ಆರ್ಟೆಮಿಸ್‌‌ ಜನರೇಷನ್‌‌ ಪ್ರೋಗ್ರಾಮ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಡಿ 2025ರಲ್ಲಿ ಚಂದ್ರನ ಮೇಲ್ಮೈಗೆ ಮೊದಲ ಮಹಿಳೆ ಹಾಗೂ ಪುರುಷನನ್ನು ಕಳುಹಿಸುವ ಯೋಜನೆಯನ್ನು ನಾಸಾ ಹಾಕಿಕೊಂಡಿದೆ.

ಅನಿಲ್‌ ಮೆನನ್‌ ಅವರ ಪೋಷಕರು ಭಾರತೀಯ ಹಾಗೂ ಉಕ್ರೀನಿಯನ್‌ ಆಗಿದ್ದು, ಇವರು ಅಮೇರಿಕಾದ ಮಿನ್ನೇಸೋಟದಲ್ಲಿ ನೆಲೆಸಿದ್ದಾರೆ. ಅನಿಲ್‌ ಮೆನನ್‌‌‌‌ ಅವರು 1999ರಲ್ಲಿ ಹಾರ್ವರ್ಡ್‌ ವಿಶ್ವಿವಿದ್ಯಾಲಯದಿಂದ ನ್ಯೂರೋಬಯಾಲಜಿಯಲ್ಲಿ ಪದವಿ ಪಡೆದರು. ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ 2004 ರಲ್ಲಿ ಮೆಕ್ಯಾನಿಕ್‌‌‌ ಎಂಜಿನಿಯರಿಂಗ್‌‌‌ ಹಾಗೂ ಸ್ಟ್ಯಾನ್‌ಫೋರ್ಡ್ ವೈದ್ಯಕೀಯ ಶಾಲೆಯಿಂದ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ. ಅನಿಲ್‌ ಮೆನನ್‌ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ನಾಸಾದ ಹಲವು ಯೋಜನೆಗಳಿಗೆ ಸೇವೆ ಸಲ್ಲಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago