ರಾಜ್ಯ ನ್ಯೂಸ್

ನಾ ಕೀಳುಭಾಷೆ ಬಲ್ಲೆ, ಆಡಲಾರೆ : ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ ಎಸ್‌, ಈಶ್ವರಪ್ಪ!

ಹಾವೇರಿ: ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರು ಸ್ಪರ್ಧೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ. ಎಸ್‌. ಈಶ್ವರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
”ಆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎನ್ನುತ್ತಿದ್ದಂತೆ, ಮಗನೇ ಬರಲಿ, ಅವರಪ್ಪನೇ ಬರಲಿ- ನಮ್ಮ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ಧರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಇದು ಮನಸ್ಸಿಗೆ ನೋವು ತಂದಿದೆ. ನಮಗೂ ಇದಕ್ಕಿಂತ ಕೀಳು ಮಟ್ಟದ ಭಾಷೆ ಬಳಸಲು ಗೊತ್ತಿದೆ,” ಎಂದು ತಿರುಗೇಟು ನೀಡಿದರು.

ಪಕ್ಷಕ್ಕೆ ದುಡಿದವರು ಚುನಾವಣೆಯಲ್ಲಿ ಟಿಕೆಟ್‌ ಕೇಳುವುದು ಅವರ ಹಕ್ಕು. ಇದನ್ನೇ ಬಂಡಾಯ, ಭಿನ್ನಮತ, ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಎನ್ನಲಾಗದು. ಪರಿವರ್ತನಾ ರಾರ‍ಯಲಿಯಲ್ಲಿ ಘೋಷಣೆಯಾಗಿರುವ ಅಭ್ಯರ್ಥಿಗಳ ಹೆಸರು ಅಸಿಂಧು ಎಂದು ಖುದ್ದು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೇ ಹೇಳಿಕೆ ನೀಡಿದ್ದಾರೆ. ಈ ಹಂತದಲ್ಲಿ ವಿಧಾನ ಪರಿಷತ್‌ ಸದಸ್ಯ ಬೇವಿನಮರದ ಸೇರಿದಂತೆ ಟಿಕೆಟ್‌ಗೆ ಪಟ್ಟು ಹಿಡಿದವರೆಲ್ಲ ಭಿನ್ನಮತೀಯರು ಎಂದು ಪರಿಗಣಿಸಲಾಗದು ಎಂದರು.

ಬಿಜೆಪಿ ಗಂಗಾನದಿ: ಬಿಜೆಪಿ ಗಂಗಾನದಿಯಷ್ಟೇ ಪವಿತ್ರ. ನಮ್ಮ ಪಕ್ಷಕ್ಕೆ ಎಂಥವರೇ ಬಂದರೂ ಪರಿಶುದ್ಧರಾಗುತ್ತಾರೆ. ಇದು ತೆರೆದ ಮನೆ ಇಲ್ಲಿಗೆ ಬರುತ್ತೇವೆ ಎನ್ನುವವರಿಗೆ ಇಲ್ಲ ಎನ್ನಲಾಗದು. ಆದರೆ ಬರುವ ವ್ಯಕ್ತಿ ಲಕ್ಷಣಗಳು, ಅವರ ಕಾರ್ಯವೈಖರಿ ವಾಂತಿ ಬರುವಂತಿದ್ದರೆ ಹೇಗೆ ಎಲ್ಲವನ್ನೂ ಕಕ್ಕುತ್ತೆವೆಯೋ ಹಾಗೆಯೇ ವ್ಯಕ್ತಿಗತವಾಗಿ ಅಮಿತ್‌ ಶಾ ಅವರು ಜನಾರ್ಧನರೆಡ್ಡಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago