ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ.
ಆ್ಯಂಬುಲೆನ್ಸ್ ತಿರುಚ್ಚಿಯಿಂದ ಬೆಂಗಳೂರಿನತ್ತ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುಂಜಾನೆ 3:30 ಸುಮಾರಿಗೆ ಘಟನೆ ನಡೆದಿದ್ದು, .ಅಂಬುಲೆನ್ಸ್ ಚಾಲಕ ಜಯ ಸೂರ್ಯ ಮತ್ತು ರೋಗಿ ಮದನ್ ಮೃತ ದುರ್ದೈವಿಗಳು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ. ಹೊಸೂರು ಸಮೀಪದ ಸೀತಾರಾಮ್ ಮೆದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತ ಸಂಭವಿಸಿದೆ.
ತಿರುಚ್ಚಿಯಿಂದ ಹೆಚ್ 1 ಎನ್1 ಜ್ವರದಿಂದ ಬಳಲುತ್ತಿದ್ದ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿಸೇಲ್ ಖಾಲಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ್ಯಂಬುಲೆನ್ಸ್ನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…