ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು – Vishwanews24
ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾದ ಘಟನೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ನಡೆದಿದೆ.
ದಾವಣಗೆರೆ ಮೂಲದ ಸುಮಂತ (23), ದರ್ಶನ (24), ಹಾಗೂ ಸುನೀಲ್ (23) ಮೃತ ದುರ್ದೈವಿಗಳು.ಈ ದುರ್ಘಟನೆ ಗೋವಾದಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ ಸಂಭವಿಸಿದೆ.
ಗಾಯಾಳುಗಳನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
