Featured

ನಿಖಿಲ್‌ ಲೋಕಸಭೆಗೆ ಸ್ಪರ್ಧಿಸಿ ಸೋತಿರಬಹುದು. ಮಂಡ್ಯ  ಮಣ್ಣಿನ ಜನರ ಬೆಂಬಲದೊಂದಿಗೆ ಮುಂದೆ ಲೋಕಸಭೆ ಪ್ರವೇಶಿಸಬಹುದು : ಕುಮಾರಸ್ವಾಮಿ -Vishwanews24

ಜಿಲ್ಲೆಯಲ್ಲಿ ಜೆಡಿಎಸ್‌ ಅಸ್ತಿತ್ವ ಗಟ್ಟಿಯಾಗಿದೆ, ಮಂಡ್ಯ ನೆಲದ ಜನರು ನಮಗೆ ಎಂದಿಗೂ ದ್ರೋಹ ಮಾಡಿಲ್ಲ.

ನಿಖಿಲ್‌ ಲೋಕಸಭೆಗೆ ಸ್ಪರ್ಧಿಸಿ ಸೋತಿರಬಹುದು. ಮಂಡ್ಯ  ಮಣ್ಣಿನ ಜನರ ಬೆಂಬಲದೊಂದಿಗೆ ಮುಂದೆ ಲೋಕಸಭೆ ಪ್ರವೇಶಿಸಬಹುದು : ಕುಮಾರಸ್ವಾಮಿ -Vishwanews24

ಮಂಡ್ಯ :  ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಗೆ ಘೋಷಿಸಿದ 9 ಸಾವಿರ ಕೋಟಿ ರು. ಹಣ ಸಂತೆಯಲ್ಲಿ ನಿಂತು ಭಾಷಣ ಮಾಡಿದ್ದಲ್ಲ. ಬಜೆಟ್‌ನಲ್ಲಿ ಘೋಷಿಸಿದ್ದು. ಬೇಕಿದ್ದರೆ ಸರ್ಕಾರದ ದಾಖಲೆಗಳನ್ನು ಪರಿಶೀಲಿಸಲಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು 9 ಸಾವಿರ ಕೋಟಿ ರು. ಹಣವನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ್ದೆ. ಮೈಷುಗರ್‌ ಹೊಸ ಕಾರ್ಖಾನೆಗೆ 400 ಕೋಟಿ ರು. ಮೀಸಲಿಟ್ಟಿದ್ದೆ. ಆಗ ಯಾರೂ ಏನು ಮಾತನಾಡಲಿಲ್ಲ. ನಾನು ಬಜೆಟ್‌ನಲ್ಲಿ ಜಿಲ್ಲೆಗೆ ಘೋಷಿಸಿದ ಹಣವನ್ನು ಬಿಜೆಪಿಯವರು ಬೇರೆ ಬೇರೆ ಕಡೆಗೆ ತೆಗೆದುಕೊಂಡು ಹೋದರು. ಅದರ ಬಗ್ಗೆ ಚಕಾರ ಎತ್ತದವರು ನನ್ನನ್ನು ಟೀಕಿಸುತ್ತಾರೆ.  ಎಂದು ಕಿಡಿಕಾರಿದರು.

ಜಿಲ್ಲೆಯಲ್ಲಿ ಜೆಡಿಎಸ್‌ ಅಸ್ತಿತ್ವ ಗಟ್ಟಿಯಾಗಿದೆ. ಮಂಡ್ಯ ನೆಲದ ಜನರು ನಮಗೆ ಎಂದಿಗೂ ದ್ರೋಹ ಮಾಡಿಲ್ಲ. ನಾವು ಬದುಕಿರುವವರೆಗೂ ಇಲ್ಲಿನ ಜನರ ಸೇವೆ ಮಾಡುವುದಕ್ಕೆ ಸಿದ್ಧರಿದ್ದೇವೆ. ಈ ನೆಲದಿಂದ ನನ್ನ ಮಗ ನಿಖಿಲ್‌ ಲೋಕಸಭೆಗೆ ಸ್ಪರ್ಧಿಸಿ ಸೋತಿರಬಹುದು. ಇದೇ ಮಣ್ಣಿನ ಜನರ ಬೆಂಬಲದೊಂದಿಗೆ ಮುಂದೆ ಲೋಕಸಭೆಯನ್ನೂ ಪ್ರವೇಶಿಸಬಹುದು ಎಂದು ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸದಿಂದ ಹೇಳಿದರು.

ಶಾಸಕರಾದ ಸಿ.ಎಸ್‌.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಕೆ.ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ವಿಧಾನಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಪಿಇಟಿ ಅಧ್ಯಕ್ಷ ವಿಜಯಾನಂದ, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌ ಇದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago