ಮಂಡ್ಯ : ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಗೆ ಘೋಷಿಸಿದ 9 ಸಾವಿರ ಕೋಟಿ ರು. ಹಣ ಸಂತೆಯಲ್ಲಿ ನಿಂತು ಭಾಷಣ ಮಾಡಿದ್ದಲ್ಲ. ಬಜೆಟ್‌ನಲ್ಲಿ ಘೋಷಿಸಿದ್ದು. ಬೇಕಿದ್ದರೆ ಸರ್ಕಾರದ ದಾಖಲೆಗಳನ್ನು ಪರಿಶೀಲಿಸಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು 9 ಸಾವಿರ ಕೋಟಿ ರು. ಹಣವನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ್ದೆ. ಮೈಷುಗರ್ ಹೊಸ ಕಾರ್ಖಾನೆಗೆ 400 ಕೋಟಿ ರು. ಮೀಸಲಿಟ್ಟಿದ್ದೆ. ಆಗ ಯಾರೂ ಏನು ಮಾತನಾಡಲಿಲ್ಲ. ನಾನು ಬಜೆಟ್‌ನಲ್ಲಿ ಜಿಲ್ಲೆಗೆ ಘೋಷಿಸಿದ ಹಣವನ್ನು ಬಿಜೆಪಿಯವರು ಬೇರೆ ಬೇರೆ ಕಡೆಗೆ ತೆಗೆದುಕೊಂಡು ಹೋದರು. ಅದರ ಬಗ್ಗೆ ಚಕಾರ ಎತ್ತದವರು ನನ್ನನ್ನು ಟೀಕಿಸುತ್ತಾರೆ. ಎಂದು ಕಿಡಿಕಾರಿದರು.
ಜಿಲ್ಲೆಯಲ್ಲಿ ಜೆಡಿಎಸ್ ಅಸ್ತಿತ್ವ ಗಟ್ಟಿಯಾಗಿದೆ. ಮಂಡ್ಯ ನೆಲದ ಜನರು ನಮಗೆ ಎಂದಿಗೂ ದ್ರೋಹ ಮಾಡಿಲ್ಲ. ನಾವು ಬದುಕಿರುವವರೆಗೂ ಇಲ್ಲಿನ ಜನರ ಸೇವೆ ಮಾಡುವುದಕ್ಕೆ ಸಿದ್ಧರಿದ್ದೇವೆ. ಈ ನೆಲದಿಂದ ನನ್ನ ಮಗ ನಿಖಿಲ್ ಲೋಕಸಭೆಗೆ ಸ್ಪರ್ಧಿಸಿ ಸೋತಿರಬಹುದು. ಇದೇ ಮಣ್ಣಿನ ಜನರ ಬೆಂಬಲದೊಂದಿಗೆ ಮುಂದೆ ಲೋಕಸಭೆಯನ್ನೂ ಪ್ರವೇಶಿಸಬಹುದು ಎಂದು ಎಚ್.ಡಿ.ಕುಮಾರಸ್ವಾಮಿ ವಿಶ್ವಾಸದಿಂದ ಹೇಳಿದರು.
ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಕೆ.ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಪಿಇಟಿ ಅಧ್ಯಕ್ಷ ವಿಜಯಾನಂದ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…