ಬೆಂಗಳೂರು : ನಿಗದಿತ ಕಿ.ಮೀ. ಗಳಷ್ಟು ಸಂಚರಿಸಿ ಸಾಮರ್ಥ್ಯ ಕಳೆದುಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಗುಜರಿಗೆ ಹಾಕಬೇಕು. ಗುಜರಿಗೆ ಹಾಕಿದ ಬಸ್ಗಳನ್ನು ಮತ್ತೆ ಸಂಚಾರಕ್ಕೆ ಬಳಸಲು ಅನುಮತಿ ನೀಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಸಾಮರ್ಥ್ಯ ಕಳೆದುಕೊಂಡು ಗುಜರಿಗೆ ಸೇರಬೇಕಾಗಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಅಪಘಾತ ಉಂಟಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣವೊಂದರಲ್ಲಿ ನ್ಯಾ. ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಲಾಗಿದೆ.
’ಬಸ್ಗಳು ಸಂಚಾರಕ್ಕೆ ಅರ್ಹವಾಗಿದೆ ಎಂದು ಪ್ರತಿ ವರ್ಷವೂ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ಸುಸ್ಥಿತಿ ದೃಢೀಕರಣ ಪತ್ರ (ಎಫ್ ಸಿ)ವನ್ನು ಪಡೆದುಕೊಳ್ಳಬೇಕು. ಆರ್ ಟಿಓ ದಿಂದ ಎಫ್ ಸಿ ಪಡೆದ ಬಸ್ ಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಬೇಕು. ಆಗ್ಗಾಗ್ಗೆ ಬಸ್ ಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ ದುರಸ್ತಿ ಮಾಡುತ್ತಿರಬೇಕು ಎಂಬ ವಿವಿಧ ನಿರ್ದೇಶನಗಳನ್ನು ಏಕಸದಸ್ಯ ನ್ಯಾಯಪೀಠ ನೀಡಿದೆ.
ಇನ್ನು ತೀರ್ಪಿನಲ್ಲಿ ನೀಡಲಾದ ನಿರ್ದೇಶನಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…