Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಹೊಸದಿಲ್ಲಿ: ಈ ಬಾರಿ ನೈಋತ್ಯ ಮುಂಗಾರು ನಿಗದಿತ ಸಮಯಕ್ಕೆ ಕೇರಳಕ್ಕೆ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಂಎಡಿ) ಬುಧವಾರ ಹೇಳಿದೆ. ಮೇ 31ಕ್ಕೆ ಮುಂಗಾರು ಭಾರತ ಪ್ರವೇಶಿಸಲಿದ್ದು, ಈ ವರ್ಷ ಭಾರತದ ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಬಾರಿ ಮುಂಚಿತವಾಗಿ ಮುಂಗಾರು ಭಾರತ ಪ್ರವೇಶಿಸುತ್ತಿಲ್ಲ. ಜೂ.1 ಮುಂಗಾರು ಭಾರತ ಪ್ರವೇಶಿಸುವ ದಿನವಾಗಿದೆ. ಕೆಲವೊಮ್ಮೆ ಇದು 7 ದಿನಗಳ ಕಾಲ ತಡವಾಗುವ ಸಾಧ್ಯತೆಯೂ ಇತ್ತು. ಆದರೆ ಈ ವರ್ಷ ನಿಗದಿತ ಸಮಯಕ್ಕೆ ಮಳೆ ಬೀಳಲಿದೆ. ಈ ಬಾರಿ ಹೆಚ್ಚೆಂದರೆ 4 ದಿನಗಳ ವ್ಯತ್ಯಾಸವಾಗಬಹುದು ಎಂದು ಐಎಂಡಿ ನಿರ್ದೇಶಕ ಮೃತ್ಯುಂಜಯ್ ಮಹೋಪಾತ್ರ ಹೇಳಿದ್ದಾರೆ. ಈ ಭಾರಿ ಭಾರತದಲ್ಲಿ ಮುಂಗಾರಿನ ಪ್ರಭಾವದಿಂದ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ. ಜೂನ್‌ನಿಂದ ಸೆಪ್ಟಂಬರ್‌ವರೆಗೆ ಮಳೆ ಅಧಿಕವಾಗಿರಲಿದೆ ಎಂದು ಇಲಾಖೆ ಕಳೆದ ತಿಂಗಳು ಹೇಳಿತ್ತು. ಭಾರತದ ಕೃಷಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಗಮನಿಸಿದರೆ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಬೀಳುವ ಮಳೆ ಅತ್ಯಂತ ಪ್ರಮುಖವಾಗಿದೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…