Featured

ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸದಿದ್ದರೆ ಟೋಲ್ ಬಂದ್ -Vishwanews24

ಕುಂದಾಪುರ: ಗದಿತ ಸಮಯದಲ್ಲಿ ಬಾಕಿಯಿರುವ ಹೆದ್ದಾರಿ ವಿಸ್ತರಣೆ ಕಾಮಗಾರಿ ಮುಗಿಸದಿದ್ದರೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹೆದ್ದಾರಿ ವಿಸ್ತರಣೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕುಂದಾಪುರ ಫೈ ಓವರ್ ಕಾಮಗಾರಿ 2020 ಮಾರ್ಚ್ ಹಾಗೂ ಪಡುಬಿದ್ರಿ ಬ್ರಿಡ್ಜ್ ರಸ್ತೆ ಕಾಮಗಾರಿ ಜನವರಿಯಲ್ಲಿ ಮುಗಿಸಬೇಕು. ಪಡುಬಿದ್ರಿ ಕೆಲಸ ಮುಗಿಸದಿದ್ದರೆ ಹೆಜಮಾಡಿ ಟೋಲ್ ಸಂಗ್ರಹ ಏ.1ರಿಂದ ಹಾಗೂ ಕುಂದಾಪುರ ಕಾಮಗಾರಿ ಮುಗಿಸದಿದ್ದರೆ ಮಾ.1ರಿಂದ ಸಾಸ್ತಾನ ಟೋಲ್ ಸಂಗ್ರಹ ನಿಲ್ಲಿಸಲಾಗುವುದು ಎಂದರು.

ಮೀಟಿಂಗ್ ಕರೆದರೂ ತಪ್ಪಿಸಿಕೊಳ್ಳುವ ಅಧಿಕಾರಿಗಳಿಗೆ ನೊಟೀಸ್ ನೀಡಲು ಸೂಚಿಸಿದ ಸಂಸದೆ ಶೋಭಾ ಕರಂದ್ಲಾಜೆ, ಹೆದ್ದಾರಿ ಕಾಮಗಾರಿ ಅಪೂರ್ಣದ ಬಗ್ಗೆ ಸಚಿವ ಗಡ್ಕರಿ ಅವರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು. ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಲೋಕೋಪಯೋಗಿ ಸಚಿವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಲಾಗುತ್ತದೆ ಎಂದರು.

ಶಾಸ್ತ್ರೀ ಸರ್ಕಲ್ ಫ್ಲೈ ಓವರ್ ವಿಚಾರದಲ್ಲಿ ಜನರಿಂದ ಠೀಕೆ ಕೇಳಬೇಕಾಗಿದೆ. ಇಲ್ಲಿನ ಸಮಸ್ಯೆಗಳು‌ ನಿಜಕ್ಕೂ ಜ್ವಲಂತ. ಈ ಗುತ್ತಿಗೆ ಕಂಪೆನಿಯನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಬೇಕಿದೆ ಎಂದು ನಿತಿನ್ ಗಡ್ಕರಿಗೆ ತಿಳಿಸಿದ್ದೇವೆ. ಇನ್ನು ಮುಂದೆ ಈ ಕಂಪೆನಿಗೆ ಯಾವುದೇ ಗುತ್ತಿಗೆ ಟೆಂಡರ್ ನೀಡಬಾರದು ಈ ಬಗ್ಗೆ ಡಿಸಿ ಅವರು ಅಧೀಕೃತ ಪತ್ರ ಬರೆದು ಕೇಂದ್ರದ ಗಮನ ಸೆಳೆಯಲಿ ಎಂದರು.

ಎನ್.ಎಚ್.ಎ.ಐ ಅಧಿಕಾರಿಗಳು ಬೇಜವಬ್ದಾರಿ ವರ್ತನೆ ತೋರುತ್ತಿದ್ದಾರೆ.‌ಯಾವುದೇ ಸಭೆಗೆ ಅವರು ಬರುತ್ತಿಲ್ಲ ಎಂದು ಡಿಸಿ ಜಿ.‌ಜಗದೀಶ್ ಅಸಮಾಧಾನ ವ್ಯಕ್ತಪಡಿಸಿದರು. ಜನವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ಕೆಲಸ ಮಾಡಿ‌ಮುಗಿಸುವ ಭರವಸೆ ನೀಡಿದಂತೆ ನಡೆದುಕೊಳ್ಳಿ ಇಲ್ಲದಿದ್ದರೆ ಫೆಬ್ರವರಿಯಲ್ಲಿ‌ ಪಡುಬಿದ್ರೆ, ಎಪ್ರಿಲ್ ತಿಂಗಳಲ್ಲಿ ಸಾಸ್ತಾನ ಟೋಲ್ ನಿಲ್ಲಿಸ್ತೇವೆ ಎಂದು ಡಿಸಿ‌ ಖಡಕ್ ಎಚ್ಚರಿಕೆ ನೀಡಿದ್ದು ಇದಕ್ಕೆ ಸಂಸದರು ‌ಕೂಡ ಸಮ್ಮತಿ ಸೂಚಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago