ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ: ಬಿಎಸ್ ವೈ ಸೂಚನೆ| vishwanews24

ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ‌ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ‌ ಸಂಘ ಹಾಗು ಟ್ಯಾಕ್ಸಿ ಮಾಲಿಕರ‌ ಸಂಘಗಳ ನಿಯೋಗವು ಸರ್ಕಾರದ ಮುಂದೆ‌ ಕೆಲ ಬೇಡಿಕೆಗಳನ್ನು‌ ಮುಂದಿಟ್ಟರು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Vishwa News 24

Recent Posts

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

49 minutes ago

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…

1 hour ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

2 hours ago

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 days ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago