ಕಾರ್ಕಳ : ನಿಟ್ಟೆಯ ಕಾಲೇಜು ಬಳಿ ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ನವೀನ್‌ಚಂದ್ರ ಮೂಲ್ಯ ಸ್ಥಳದಲ್ಲೇ ಮೃತಪಟ್ಟು, ಅವರ ಮಗಳು ಪ್ರೇರಣಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆಕೆಯೂ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಏ .24 ರಂದು ಈ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜಿಗೆ ಪರೀಕ್ಷೆಗೆ ಹೋಗಿದ್ದ ಮಗಳು ಪ್ರೇರಣಾಳ ಹಾಗೂ ತಂದೆ ನವೀನ್ ಚಂದ್ರ ಮೂಲ್ಯ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪೆಟ್ರೋಲ್ ಬಂಕ್ ಬಳಿ ಕಾರ್ಕಳದಿಂದ ನಿಟ್ಟೆ ಕಡೆಗೆ ಯಮ ವೇಗದಲ್ಲಿ ನುಗ್ಗಿ ಬಂದ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿದ್ದ ಕಾರು ನೇರವಾಗಿ ನವೀನ್ ಚಂದ್ರ ಅವರು ಚಲಾಯಿಸುತ್ತಿದ್ದ ಬೈಕಿಗೆ ಅಪ್ಪಳಿಸಿದೆ. ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ನವೀನ್‌ಚಂದ್ರ ಅವರು ರಸ್ತೆಗೆ ಎಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟಿದ್ದರು.
ಮಗಳು ಪ್ರೇರಣಾ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ ಸೋಮವಾರ ಬೆಳಗ್ಗೆ ಉಸಿರು ಚೆಲ್ಲಿದ್ದಾರೆ.
ಕುಟುಂಬಕ್ಕೆ ಆಧಾರವಾಗಿದ್ದ ತಂದೆ ಹಾಗೂ ಬಾಳಿ ಬದುಕಬೇಕಿದ್ದ ಮಗಳು ತಮ್ಮದಲ್ಲದ ತಪ್ಪಿಗೆ ಜೀವ ಕಳೆದುಕೊಂಡಿದ್ದು, ಈ ಅಪಘಾತಕ್ಕೆ ಕಾರಣರಾದ ವಿದ್ಯಾರ್ಥಿಗಳ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇತ್ತ ಪತಿ ಹಾಗೂ ಮಗಳನ್ನು ಕಳದುಕೊಂಡ ತಾಯಿ ಹಾಗೂ ಅವರ ಸಂಬoಧಿಕರ ನೋವು ಆಕ್ರಂದನ ಮುಗಿಲುಮುಟ್ಟಿದೆ. ಅಮಾಯಕರ ಪ್ರಾಣ ತೆಗೆದ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆಯಾಗಬೇಕೆನ್ನುವುದು ಎಲ್ಲರ ಆಗ್ರಹವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…