Featured

ನಿಫಾ ವೈರಸ್ : ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನ  ವರದಿ ನೆಗೆಟಿವ್ : ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ನಿಫಾ ವೈರಸ್ : ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನ  ವರದಿ ನೆಗೆಟಿವ್ : ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ಮಂಗಳೂರು : ನಿಫಾ ವೈರಸ್ ಶಂಕೆಯಿಂದ ಆತಂಕಿತನಾಗಿದ್ದ ಕಾರವಾರ ಮೂಲದ ಯುವಕನ ವರದಿಯೂ ಪುಣೆಯ ಎನ್ಐವಿ ಪ್ರಯೋಗಾಲಯದಿಂದ ಬಂದಿದ್ದು, ನಿಫಾ ನೆಗೆಟಿವ್ ಆಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ನಿಫಾ ವೈರಸ್‌ನ ಆಂತಕದ ಹಿನ್ನಲೆ ಯುವಕನೊಬ್ಬ ನಗರದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ. ಕಾರವಾರ ಮೂಲದ ಈ ಯುವಕ ಗೋವಾದಲ್ಲಿ ಸಾಂಕ್ರಾಮಿಕ ರೋಗ ಪತ್ತೆ ಕಿಟ್ ತಯಾರಿಕಾ ಲ್ಯಾಬ್ ನಲ್ಲಿ ತಕೆಲಸ ಮಾಡುತ್ತಿದ್ದ. ಅಲ್ಲಿಂದ ರಜೆಯಲ್ಲಿ ಕಾರವಾರಕ್ಕೆ ಬಂದ ಮೇಲೆ ಆತನಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ನಿಫಾ ವೈರಸ್ ಇರಬಹುದು ಎಂದು ಕಾರವಾರ ಆಸ್ಪತ್ರೆಗೆ ಹೋಗಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಬಂದಿದ್ದಾನೆ. ಆ ಬಳಿಕ ಅಲ್ಲಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಬಂದಿದ್ದು, ಆತನ ಸ್ಯಾಂಪಲ್‌ನ್ನು ಸಂಗ್ರಹ ಮಾಡಿರುವ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಪುಣೆಯ ಲ್ಯಾಬ್‌ಗೆ ಕಳುಹಿಸಿತ್ತು.

ಗೋವಾದಿಂದ ರಜೆ ಮೇಲೆ ಕಾರವಾರಕ್ಕೆ ಬೈಕ್ ನಲ್ಲಿ ಮಳೆಯಲ್ಲಿ ಬಂದಿದ್ದು, ಹೀಗಾಗಿ ಜ್ವರ ಕಾಣಿಸಿಕೊಂಡಿದೆ. ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರೂ, ಸ್ವಯಂ ತಪಾಸಣೆಗೆ ಇಚ್ಚಿಸಿದ್ದರಿಂದ ಹಾಗೂ ನಿಫಾ ಬಗ್ಗೆ ನಿರ್ಲಕ್ಷ ಮಾಡಲು ಸಾಧ್ಯವಿಲ್ಲದಿದ್ದರಿಂದ ಟೆಸ್ಟ್ ಗೆ ಕಳುಹಿಸಿದ್ದೇವು. ಇದೀಗ ನಿಫಾ ಪರೀಕ್ಷಾ ವರದಿ ನೆಗೆಟಿವಿ ಬಂದಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago