ಮಂಗಳೂರು : ನಿಫಾ ವೈರಸ್ ಶಂಕೆಯಿಂದ ಆತಂಕಿತನಾಗಿದ್ದ ಕಾರವಾರ ಮೂಲದ ಯುವಕನ ವರದಿಯೂ ಪುಣೆಯ ಎನ್ಐವಿ ಪ್ರಯೋಗಾಲಯದಿಂದ ಬಂದಿದ್ದು, ನಿಫಾ ನೆಗೆಟಿವ್ ಆಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಿಫಾ ವೈರಸ್‌ನ ಆಂತಕದ ಹಿನ್ನಲೆ ಯುವಕನೊಬ್ಬ ನಗರದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ. ಕಾರವಾರ ಮೂಲದ ಈ ಯುವಕ ಗೋವಾದಲ್ಲಿ ಸಾಂಕ್ರಾಮಿಕ ರೋಗ ಪತ್ತೆ ಕಿಟ್ ತಯಾರಿಕಾ ಲ್ಯಾಬ್ ನಲ್ಲಿ ತಕೆಲಸ ಮಾಡುತ್ತಿದ್ದ. ಅಲ್ಲಿಂದ ರಜೆಯಲ್ಲಿ ಕಾರವಾರಕ್ಕೆ ಬಂದ ಮೇಲೆ ಆತನಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ನಿಫಾ ವೈರಸ್ ಇರಬಹುದು ಎಂದು ಕಾರವಾರ ಆಸ್ಪತ್ರೆಗೆ ಹೋಗಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಬಂದಿದ್ದಾನೆ. ಆ ಬಳಿಕ ಅಲ್ಲಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಬಂದಿದ್ದು, ಆತನ ಸ್ಯಾಂಪಲ್‌ನ್ನು ಸಂಗ್ರಹ ಮಾಡಿರುವ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಪುಣೆಯ ಲ್ಯಾಬ್‌ಗೆ ಕಳುಹಿಸಿತ್ತು.
ಗೋವಾದಿಂದ ರಜೆ ಮೇಲೆ ಕಾರವಾರಕ್ಕೆ ಬೈಕ್ ನಲ್ಲಿ ಮಳೆಯಲ್ಲಿ ಬಂದಿದ್ದು, ಹೀಗಾಗಿ ಜ್ವರ ಕಾಣಿಸಿಕೊಂಡಿದೆ. ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರೂ, ಸ್ವಯಂ ತಪಾಸಣೆಗೆ ಇಚ್ಚಿಸಿದ್ದರಿಂದ ಹಾಗೂ ನಿಫಾ ಬಗ್ಗೆ ನಿರ್ಲಕ್ಷ ಮಾಡಲು ಸಾಧ್ಯವಿಲ್ಲದಿದ್ದರಿಂದ ಟೆಸ್ಟ್ ಗೆ ಕಳುಹಿಸಿದ್ದೇವು. ಇದೀಗ ನಿಫಾ ಪರೀಕ್ಷಾ ವರದಿ ನೆಗೆಟಿವಿ ಬಂದಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…