ಫಾರಂ ಕೋಳಿಗಳಿಂದನಿಫಾ ವೈರಸ್ ಹರಡುತ್ತದೆ ಎಂದು ಸಾಮಾಜಿಕ ತಾಣ ಹಾಗೂ ವಾಟ್ಸ್ ಆಪ್ಗಳಲ್ಲಿ ಸುಳ್ಳು ಸಂದೇಶರವಾನೆ ಸಂಬಂಧ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಫಾರಂ ಕೋಳಿ ವಿತರಕರ ಸಂಘವು, ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ಬಗ್ಗೆ ದೂರು ನೀಡಿದ್ದು, ಈ ಸಂಬಂಧ ಮೂವಾಟ್ಟುಪುಳದಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಓರ್ವನನ್ನು ವಿಚಾರಣೆ ನಡೆಸಿ ಬಿಡುಗಡೆ ಮಾಡಿರುವುದಾಗಿ ತಿಳಿದು ಬಂದಿದೆ.
ಕಣ್ಣೂರಿನ ಮೂವಾಟ್ಟುಪುಳದಲ್ಲಿ ಕೋಳಿಗಳಿಂದ ನಿಫಾ ವೈರಸ್ ಹರಡುತ್ತಿರುವುದನ್ನು ಪುಣೆಯ ವೈರಾಲಜಿ ಸಂಸ್ಥೆ ನಿರ್ದೇಶಕ ಡಾ. ಆನಂದ ಬಸು ಅವರು ಖಚಿತಪಡಿಸಿದ್ದಾರೆ ಎಂಬ ವಾಟ್ಸ್ಆಪ್ ಸಂದೇಶವನ್ನು ರವಾನಿಸಿದ್ದಾರೆ. ಈ ಸಂಬಂಧ ಸುನಿಲ್ ಕುಮಾರ್(28) ಬಂಧಿಸಲಾಗಿದೆ. ಸುನಿಲ್ ಕುಮಾರ್ ತನೆಗೆ ಬಂದ ಸಂದೇಶಕ್ಕೆ ಸಂದೇಶ ರವಾನಿಸಿ, ಜೀವ ಉಳಿಸಿ ಎಂಬ ಟ್ಯಾಗ್ ಲೈನ್ ಸೇರಿಸಿ, ಇತರರಿಗೆ ಕಳುಹಿಸಿದ್ದಾನೆ. ಅಲ್ಲದೆ ಕೋಳಿ ಮಾಂಸ ತಿನ್ನದಂತೆ ಎಚ್ಚರಿಕೆ ಸಂದೇಶವನ್ನೂ ರವಾನಿಸಿರುವುದಾಗಿ ಕಣ್ಣೂರು ನಗರ ಉಪ ಪೊಲೀಸ್ ಅಧೀಕ್ಷಕ ಶ್ರೀಜಿತ್ ಕೊಡೇರಿ ತಿಳಿಸಿದ್ದಾರೆ.
ನಕಲಿ ಸಂದೇಶ
ಮತ್ತೊಂದು ಪ್ರಕರಣದಲ್ಲಿ, ಫಾರಂ ಕೋಳಿಗಳಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು, ಪ್ರಯೋಗಾಲಯಗಳು ಈ ವಿಚಾರವನ್ನು ಅಧಿಕೃತಗೊಳಿಸಿದೆ. ಅಲ್ಲದೆ ಆರೋಗ್ಯ ಇಲಾಖೆಯೂ ಈ ಬಗ್ಗೆ ಎಚ್ಚರಿಕೆ ನೀಡಿರುವುದಾಗಿ ಸಂದೇಶ ಹರಿದಾಡಿತ್ತು. ಅಲ್ಲದೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಕಲಿ ಸೀಲ್ ಬಳಸಿ, ಎಚ್ಚರಿಕೆ ಸಂದೇಶಗಳನ್ನೂ ರವಾನಿಸಲಾಗಿದೆ. ಈ ಸಂಬಂಧ ಓರ್ವನನ್ನು ವಿಚಾರಣೆ ನಡೆಸಿರುವ ಅಧಿಕಾರಿಗಳು ಬಳಿಕ ಬಿಡುಗಡೆ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…