Featured

ನಿಮಗೆ ಅಧಿಕಾರ ಕೊಟ್ಟ ಕನ್ನಡಿಗರ ದೌರ್ಭಾಗ್ಯ : ಆರಗ ಜ್ಞಾನೇಂದ್ರ ಗೆ ಎಚ್‌ಡಿಕೆ – Vishwanews24

ಮನುಷ್ಯನ ಜೀವಕ್ಕೆ ಬೆಲೆ ಏನಾದರೂ‌ ಇದೆಯಾ? ಜೈಲುಗಳು ಸಾವಿನ ಕೂಪ ..

ಬೆಂಗಳೂರು : ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ನಿಮ್ಮ ಸರ್ಕಾರದ ಆಡಳಿತದಲ್ಲಿ ಮನುಷ್ಯನ ಜೀವಕ್ಕೆ ಬೆಲೆ ಏನಾದರೂ‌ ಇದೆಯಾ? ಜೈಲುಗಳು ಸಾವಿನ ಕೂಪ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

2021ರ ರಾಷ್ಟ್ರೀಯ ಅಪರಾಧ ದಾಖಲೆಗಳ (ಎನ್ ಸಿಆರ್ ಬಿ) ಬ್ಯೂರೋ ವರದಿ ಪ್ರಕಾರ ಕರ್ನಾಟಕದ ಜೈಲುಗಳಲ್ಲಿ ಅನಾರೋಗ್ಯದ ಕಾರಣ 58 ಕೈದಿಗಳು ಸಾವೀಗೀಡಾಗಿರುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ, ನಿಮ್ಮದೇ ಪಕ್ಷದ ಕಾರ್ಯಕರ್ತರಿಗೂ ಜೀವರಕ್ಷಣೆ ಇಲ್ಲ. ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೂ ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಲು ವಿಫಲರಾಗಿದ್ದೀರಿ. ಮಾನವ ಹಕ್ಕುಗಳು ನಿಮ್ಮ ಪಾಲಿಗೆ ತಮಾಷೆಯ ಸಂಗತಿ ಇರಬೇಕೇನೋ. ನಿಮಗೆ ಅಧಿಕಾರ ಕೊಟ್ಟ ಕನ್ನಡಿಗರ ದೌರ್ಭಾಗ್ಯ ಇದು ಎಂದರು.

ಸಾವಿಗೀಡಾದ 58 ಕೈದಿಗಳಲ್ಲಿ 16 ಮಂದಿ ಹೃದಯಾಘಾತ, 11 ಜನ ಶ್ವಾಸಕೋಶ ಸಂಬಂಧಿ ಕಾಯಿಲೆ, ಉಳಿದವರು ಎಚ್ ಐವಿ & ಟಿ.ಬಿ., ಯಕೃತ್ತು, ಕಿಡ್ನಿ, ಕ್ಯಾನ್ಸರ್ ಸಮಸ್ಯೆಗಳಿಂದ ಬಳಲುತ್ತಿದ್ದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಾರ ಬೆಂಗಳೂರಿನ ಕಾರಾಗೃಹಗಳಲ್ಲಿರುವ 8,681 ಕೈದಿಗಳಿಗೆ ಸಮರ್ಪಕ ಆರೋಗ್ಯ ಸೇವೆಯ ಅಗತ್ಯವಿತ್ತು. ಆದರೆ, ಕೇವಲ 2,537 ಮಂದಿಗೆ ಮಾತ್ರ ವೈದ್ಯಕೀಯ ನೆರವು ಸಿಕ್ಕಿದೆ. ಜೈಲುಗಳೂ ಅಸಮರ್ಪಕ ಅವ್ಯವಸ್ಥೆಯಿಂದ ಕೊಳೆಯುತ್ತಿರುವ ಸಂಗತಿ 40% ಕಮಿಷನ್ ಸರ್ಕಾರಕ್ಕೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಬಂಧೀಖಾನೆಗಳಲ್ಲಿ 80 ಜನರ ಆರೋಗ್ಯ ಸಿಬ್ಬಂದಿಯ ಅಗತ್ಯ ಇದೆ. ಅಂಕಿ-ಸಂಖ್ಯೆಯ ಪ್ರಕಾರ ಕೇವಲ 31 ಮಂದಿಯ ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿದೆ ಎಂದು ಎನ್ ಸಿ ಆರ್ ಬಿ ವರದಿ ಬಹಿರಂಗಗೊಳಿಸಿದೆ. 27 ಮಂದಿ ಆರೋಗ್ಯ ವೈದ್ಯಕೀಯ ಅಧಿಕಾರಿಗಳ ಬದಲಿಗೆ 9 ಜನ ಅಧಿಕಾರಿಗಳು ಮಾತ್ರ ಕೆಲಸ ಮಾಡುತ್ತಿದ್ದಾರೆ. 499 ಕೈದಿಗಳಿಗೆ ಒಬ್ಬ ಆರೋಗ್ಯ ಸಿಬ್ಬಂದಿ ಕೆಲಸ ಮಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಿದೆ. ಅರಗ ಜ್ಞಾನೇಂದ್ರ ಅವರೆ, ನಿಮ್ಮ ಆಡಳಿತದಲ್ಲಿ ಸಾಮಾನ್ಯ ರೈತನಿಗಾಗಲಿ, ಕೆಲಸ ಸಿಗದೇ ಪರಿತಪಿಸುತ್ತಿರುವ ಯುವಕ-ಯುವತಿಯರಿಗಾಗಲಿ, ಕಮಿಷನ್ ದಂಧೆಯಲ್ಲಿ ಹೈರಾಣಾಗಿ ಜೀವ ಕಳೆದುಕೊಳ್ಳುತ್ತಿರುವ ಗುತ್ತಿಗೆದಾರರಿಗಾಗಲಿ, ಅಧಿಕಾರಿ ವರ್ಗವಾಗಲಿ, ಕಾರ್ಮಿಕರಾಗಲಿ ಯಾರೂ ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದ್ದಾರೆ.

Vishwa News 24

Recent Posts

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

7 minutes ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

18 minutes ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

26 minutes ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

34 minutes ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

40 minutes ago

ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24

ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…

46 minutes ago