ಬೆಂಗಳೂರು: ನಿಮ್ಮೆಲ್ಲರ ಸಹಕಾರದಿಂದ ನನ್ನ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ. ರಾಷ್ಟ್ರೀಯ ಅಧ್ಯಕ್ಷರು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಬಹು ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು
ಕೆಐಎಎಲ್‍ನಲ್ಲಿ ಮಾತನಾಡಿದ ನಳಿನ್ ಕುಮಾರ್, ಇಂದು ನನಗೆ ಬಹಳ ಖುಷಿಯಾಗಿದೆ. ಕರ್ನಾಟಕದ ಬೆಂಗಳೂರು ನಗರವನ್ನು ಸಂವೃದ್ಧಿ ಮಾಡಿರುವ ಕೆಂಪೇಗೌಡರ ಪುಣ್ಯ ಭೂಮಿಯಲ್ಲಿ ಅವರ ಆಶೀರ್ವಾದ ಪಡೆಯುವ ಮೂಲಕ ಈ ಜವಾಬ್ದಾರಿಯನ್ನು ನಿರ್ವಹಿಸಲು ಹೋಗುತ್ತಿದ್ದೇನೆ ಎಂದು ತಮಗೆ ಸ್ವಾಗತ ಕೋರಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಸಾಮಾನ್ಯ ಕಾರ್ಯಕರ್ತ ಪ್ರಧಾನಿ ಆಗುವುದು, ರಾಜ್ಯಾಧ್ಯಕ್ಷ ಆಗೋದು ಸುಲಭದ ಮಾತಲ್ಲ.ನಿಮ್ಮೆಲ್ಲರ ಸಹಕಾರದಿಂದ ನನ್ನ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ. ಇಡೀ ರಾಷ್ಟ್ರದಲ್ಲಿ ಗುರುತಿಸುವಂತಹ ಪ್ರಧಾನಿ ಮೋದಿಯವರ ನೇತೃತ್ವವಿದೆ. ರಾಜ್ಯದಲ್ಲಿ ರೈತರ ಪರವಾಗಿ ಹೋರಾಟ ಮಾಡುವ ಯಡಿಯೂರಪ್ಪ ಅವರ ನೇತೃತ್ವವಿದೆ. ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರ ಜೊತೆಯಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ ಎಂದರು.
ಶ್ರೇಷ್ಠವಾದ ಜವಾಬ್ದಾರಿ ನೀಡಿದ್ದಾರೆ. ಒಬ್ಬ ಕಾರ್ಯಕರ್ತನ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತೇನೆ. ಬಿಜೆಪಿ ಸರ್ವ ವ್ಯಾಪಿ, ಸರ್ವ ಸ್ಪರ್ಶಿಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಬೆಳೆದಿದೆ. ಇದನ್ನ ಇನ್ನಷ್ಟು ಗಟ್ಟಿ ಮಾಡುತ್ತೀನಿ. ಯಡಿಯೂರಪ್ಪ ಅವರ ಜೊತೆ ಸಹಕಾರಿಯಾಗಿ ನಿಂತು ಕೆಲಸ ನಿರ್ವಹಿಸುತ್ತೇನೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…