ಜಿಲ್ಲೆ

ನಿಮ್ಮ ಕರ್ಮಕಾಂಡ ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ: ಪ್ರಧಾನಿ ಮೋದಿ

ಪ್ರಧಾನಿ ಮೋದಿ  ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಉಪವಾಸ ಸತ್ಯಾಗ್ರಹ  ವಿಚಾರದಲ್ಲಿ ಟಾಂಗ್ ಕೊಟ್ಟ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಸಂಸದರು ಒಂದು ದಿನ ಸಂಸತ್ತಿನ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದರು. ಸಂಸತ್ ಅಧಿವೇಶನ ಸರಿಯಾಗಿ ನಡೆಯಲು ಬಿಡಲಿಲ್ಲ ಎಂಬ ಕಾರಣಕ್ಕೆ ಉಪವಾಸ ಸತ್ಯಾಗ್ರಹ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಬಿಜೆಪಿಯ ಈ ತೀರ್ಮಾನವನ್ನು ಟೀಕಿಸಿರುವ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲ ಇದೊಂದು ನಾಟಕ ಎಂದಿದ್ದಾರೆ.  ‘ಸಿಬಿಎಸ್ ಇ ಮತ್ತು ಎಸ್ಎಸ್ ಸಿ ಹಗರಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದ್ದಕ್ಕೆ ಕೇಂದ್ರ ಸರ್ಕಾರ ಪ್ರಾಯಶ್ಚಿತ ರೂಪದಲ್ಲಿ ಸತ್ಯಾಗ್ರಹ ಮಾಡಲಿ’ ಎಂದು ಟೀಕಿಸಿದ್ದರು.

ಕಾಂಗ್ರೆಸ್ ಪ್ರತಿಕ್ರಿಯೆಗೆ ತಕ್ಕ ತಿರುಗೇಟು ಕೊಟ್ಟಿರುವ ಪ್ರಧಾನಿ ಮೋದಿ ‘ಮೊದಲು ನಿಮ್ಮ ಅಕ್ರಮಗಳನ್ನು ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ. 2014 ರಲ್ಲಿ ಸೋತ ಒಂದು ರಾಜಕೀಯ ಪಕ್ಷ ದೇಶವನ್ನು ಮುಂದುವರಿಯಲು ಬಿಡುತ್ತಿಲ್ಲ. ಒಂದು ದಿನವೂ ಸಂಸತ್ ಕಲಾಪ ನಡೆಯಲು ಬಿಡದೇ ಇವರು ದೇಶದ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದರು. ಇಂತಹವರ ವಿರುದ್ಧ ನಾನು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಮತ್ತು ನನ್ನ ಕರ್ತವ್ಯವನ್ನೂ ನಿಭಾಯಿಸುತ್ತೇನೆ’ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago