ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಡಾ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದಿನೇಶ್ ಗುಂಡೂರಾವ್ ವಿರುದ್ಧ ಟ್ವೀಟ್ ಮಾಡಿರುವ ಡಾ.ಸುಧಾಕರ್, ”ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ಎಂದು ಟೀಕಿಸಿದ್ದಾರೆ.
”ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆಗಳಿಂದ ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿ ತಲುಪಿದೆ ಎಂದವರು ಟೀಕಿಸಿದ್ದಾರೆ.
ಲೋಕಸಭೆ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದೇ ಒಂದು ಸ್ಥಾನಗೆದ್ದಿತು. ಇತಿಹಾಸದಲ್ಲೇ ಇಂತಹ ಮುಖಭಂಗ ಕಾಂಗ್ರೆಸ್ ಪಕ್ಷಕ್ಕೆ ಎಂದೂ ಆಗಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲ ಹೀನತೆ ಬಗ್ಗೆ ಪರಾಮರ್ಶಿಸಿಕೊಳ್ಳಿ. ನಿಮ್ಮ ಈ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು. ನಿಮ್ಮ ಈ ಭಿಕ್ಷಾ ವರ್ತನೆಯಿಂದ ನಾವು ಹೊರಬಂದು ಇವತ್ತು ರಾಜರಂತಿದ್ದೇವೆ. ‘ಮೂರು’ ಇದ್ದವರು ಆ ಸ್ಥಾನದಲ್ಲಿ ಒಂದೇ ಒಂದು ಕ್ಷಣವು ಕೂರಬಾರದು ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…