Featured

ನಿಮ್ಮ ಪರ ನಾವಿದ್ದೇವೆ ಎಂದು ನಡ್ಡಾ ಭರವಸೆ ನೀಡಿದ್ದಾರೆ : ಶ್ರೀರಾಮುಲು – vishwanews24

ನೀವು ಪಾರ್ಟಿ ಬಿಡುವ ಬಗ್ಗೆ ಯೋಚನೆ ಮಾಡಬೇಡಿ ಎಂದು ಜೋಶಿ ಹೇಳಿದ್ದರು : ಶ್ರೀರಾಮುಲು

ಬಳ್ಳಾರಿ:  ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಹೈಕಮಾಂಡ್ ನಾಯಕರ ಮುಂದೆ ಕೇಳಿಕೊಳ್ಳುತ್ತೇನೆ. ಹೈಕಮಾಂಡ್ ಇಟ್ಟ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

 

ಅಸಮಾಧಾನದ ಕುರಿತು ಬಳ್ಳಾರಿಯ ಮನೆಯಲ್ಲಿ ಶುಕ್ರವಾರ ಮಾತನಾಡಿದ ಶ್ರೀರಾಮುಲು, ಗುರುವಾರ ಜೆಪಿ ನಡ್ಡಾ ಅವರು ದೂರವಾಣಿ ಮೂಲಕ ಮಾತಾಡಿದರು. ಏನಾಗಿದೆ ಎನ್ನುವ ಮಾಹಿತಿ ಎಲ್ಲವನ್ನೂ ವಿವರಿಸಿದ್ದೇನೆ. ಕೋರ್ ಕಮಿಟಿಯಲ್ಲಿ ರಾಧಾಮೋಹನ್ ಅಗರವಾಲ್ ನಡೆದುಕೊಂಡ ಬಗ್ಗೆಯೂ ಹೇಳಿದ್ದೇನೆ. ರಾಮುಲು ನಿನ್ನ ಪರವಾಗಿ ನಾನಿದ್ದೇನೆ, ಯಾವುದೇ ಯೋಚನೆ ಮಾಡಬೇಡಿ. ಮುಂದೆ ದೆಹಲಿಗೆ ಬರುವುದಾಗಿದ್ದರೆ ಬನ್ನಿ ಎಂದು ನಡ್ಡಾ ಹೇಳಿದ್ದಾರೆ. ನಾನು ಸಹಾಯಕರಿಂದ ಅಪಾಯಿಟ್ಮೆಂಟ್ ತಗೊಂಡು ಬರುತ್ತೇನೆ ಎಂದು ಹೇಳಿದ್ದೇನೆ‌ ಎಂದರು.

ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಸುದ್ದಿ ಮುಟ್ಟಿಸಿದ್ದೇವೆ, ನಿಮ್ಮ ಪರವಾಗಿ ನಾವಿದ್ದೇವೆ ಎಂದು ನಡ್ಡಾ ಹೇಳಿದ್ದಾರೆ. ಜೋಶಿಯವರೂ ಕರೆ ಮಾಡಿ, ನಡ್ಡಾ ಜೊತೆ ಮಾತನಾಡುವಂತೆ ಹೇಳಿದ್ದರು. ನಿಮಗೆ ನೋವಾಗಿದೆ ಎನ್ನುವುದು ಗೊತ್ತಾಗಿದೆ. ಅಗರವಾಲ್ ಸಹಿತ ತಮ್ಮ ಮಾತು ಹಿಂದಕ್ಕೆ ತಗೊಳ್ಳುವುದಾಗಿ ಹೇಳಿದ್ದಾರೆ. ನೀವು ಪಾರ್ಟಿ ಬಿಡುವ ಬಗ್ಗೆ ಯೋಚನೆ ಮಾಡಬೇಡಿ ಎಂದು ಜೋಶಿ ಹೇಳಿದ್ದರು. ವಿಜಯೇಂದ್ರ ನನ್ನ ಜೊತೆ ಮಾತಾಡಿದ್ದಾರೆ. ನಿಮಗೆ ಈ ರೀತಿ ಆಗಿರುವುದು ನೋವಾಗಿದೆ ಎಂದು ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಬೊಮ್ಮಾಯಿ, ಸದಾನಂದ ಗೌಡ ಸಹ ಮಾತಾಡಿದ್ದಾರೆ. ಎಲ್ಲರಿಗೂ ನನ್ನ ಮೇಲೆ ವಿಶ್ವಾಸವಿದೆ. ನನ್ನ ಸುಧೀರ್ಘ ರಾಜಕೀಯ ಇತಿಹಾಸದಲ್ಲಿ ಬಿಜೆಪಿಗೆ ಸಾಧ್ಯವಾದಷ್ಟು ಅಳಿಲು ಸೇವೆ ಸಲ್ಲಿಸಿದ್ದೀನೆ. ಹೀಗಾಗಿ ಅದನ್ನ ಗುರುತಿಸಿ ಮಾತನಾಡ್ತಿದ್ದಾರೆ. ನನ್ನ ಕಳೆದುಕೊಳ್ಳಬಾರದು ಎಂದು ಹೇಳಿದ್ದಾರೆ. ಎಲ್ಲವನ್ನೂ ಪಾರ್ಟಿಯವರಿಗೆ ತಿಳಿಸಿದ್ದೇನೆ. ಇನ್ಮೇಲೆ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಮಾತಾಡೋಣ ಎಂದಿದ್ದಾರೆ ಎಂದರು.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

18 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

19 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago