Featured

ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ  : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ – VIshwanews24

ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ  : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಮಂಗಳೂರು: ಕಡಲನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ವಾರ್ ಶುರುಮಾಡಿದ್ದಾರೆ. ಮೋದಿಗೆ ಟ್ವೀಟ್ ಮೂಲಕ ಸಿದ್ದರಾಮಯ್ಯ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ ಎಂದು ಲೇವಡಿ ಮಾಡಿದ್ದಾರೆ.

“ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರಮೋದಿಯವರಿಗೆ ಮಂಗಳೂರಿಗೆ ಸ್ವಾಗತ. ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ.ಇದು ವಿಕಾಸವೋ? ವಿನಾಶವೋ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ” ಎಂದು ಕಾಳೆಲೆದಿದ್ದಾರೆ.

ಇಂದು ಪ್ರಧಾನಿ ಮಂಗಳೂರಿಗೆ- ತುಳು ಭಾಷೆ ಮಾನ್ಯತೆಗೆ 50 ಸಾವಿರಕ್ಕೂ ಅಧಿಕ ಟ್ವೀಟ್‌ – Vishwanews24

ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906)ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925)ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931)ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ನೀವು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದಿರಿ . ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಯತ್ನಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮಂಗಳೂರಿಗೆ – ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ, ಲೈಟರ್‌, ಬೆಂಕಿಪೊಟ್ಟಣ ನಿಷೇಧ : ಎಡಿಜಿಪಿ ಅಲೋಕ್‌ ಕುಮಾರ್ ಖಡಕ್ ಸೂಚನೆ – VIshwanews24

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

4 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago